ಕರ್ನಾಟಕ

ಸಿಎಂ ಮನೆಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದವನ ಬಂಧನ

Pinterest LinkedIn Tumblr

bomb+threat1121

ಬೆಂಗಳೂರು, ಮೇ 18: ಮುಖ್ಯಮಂತ್ರಿ ಸಿದ್ದರಾಮಯ್ಯರವರ ಮನೆಯಲ್ಲಿ ಬಾಂಬ್ ಇಡಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಳ್ಳಲಿದೆ ಎಂದು ಪೊಲೀಸ್ ಕಂಟ್ರೋಲ್ ರೂಂಗೆ ಕರೆಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.

ಹೊನ್ನಾರಪೇಟೆ ನಿವಾಸಿ ರಾಜು (43) ಬಂಧಿತ ಆರೋಪಿ. ಕಳೆದ ಫೆ.18 ರಂದು ಪೊಲೀಸ್ ಕಂಟ್ರೋಲ್ ರೂಂಗೆ ಕರೆಮಾಡಿದ್ದ ಅನಾಮಧೇಯ ವ್ಯಕ್ತಿ ಮುಖ್ಯಮಂತ್ರಿ ನಿವಾಸದಲ್ಲಿ ಬಾಂಬ್ ಇಡಲಾಗಿದೆ. ಅರ್ಧ ಗಂಟೆಯಲ್ಲೇ ಸ್ಫೋಟಗೊಳ್ಳಲಿವೆ ಎಂದು ಹೇಳಿ ಕರೆ ಕಟ್ ಮಾಡಿದ್ದ. ಈ ಕರೆಯಿಂದ ಗಾಬರಿಯಾದ ಪೊಲೀಸರು, ಬಾಂಬ್ ನಿಷ್ಟ್ರೀಯ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಶೋಧ ಕೈಗೊಂಡಾಗ ಇದು ಹುಸಿ ಕರೆ ಎಂಬುದು ಗೊತ್ತಾಯಿತು.

ತಕ್ಷಣ ಕಬ್ಬನ್‌ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅನಾಮಧೇಯ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಿ ಇನ್ನೇನು ಬಂಧಿಸಬೇಕು ಎನ್ನುವಷ್ಟರಲ್ಲಿ ವಿವಿಧ ಜಿಲ್ಲೆಗಳಿಗೆ ತೆರಳಿ ತಲೆಮರೆಸಿಕೊಂಡಿದ್ದನು. ಈತ ಬೆಂಗಳೂರಿನ ಮರಳಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಕುಡಿದ ಮತ್ತಿನಲ್ಲಿ ಅಂದು ಕರೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

Write A Comment