ಕರ್ನಾಟಕ

ಜಯಲಲಿತಾಗೆ ಕಾನೂನು ಮೂಲಕವೇ ಪ್ರತ್ಯುತ್ತರ : ಸಿದ್ದು

Pinterest LinkedIn Tumblr

Siddaramaiah_PTI

ಬೆಂಗಳೂರು, ಜೂ.5- ಕಾವೇರಿ ನದಿ ಮಾಲಿನ್ಯ ಕುರಿತು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಸುಪ್ರೀಂಕೋರ್ಟ್‌ನ ಹಸಿರು ಪೀಠದ ಮುಂದೆ ಸಲ್ಲಿಸಿರುವ ತಕರಾರು ಅರ್ಜಿಗೆ ಕಾನೂನು ಮೂಲಕವೆ ಉತ್ತರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ತಮಿಳುನಾಡು ಸರ್ಕಾರ ನ್ಯಾಯಾಲಯಕ್ಕೆ ಹೋದರೆ ನಾವೂ ಕೂಡ ನ್ಯಾಯಾಲಯದಲ್ಲೆ ಹೋರಾಟ ಮಾಡುತ್ತೇವೆ. ಕಾನೂನು ಮೂಲಕವೆ ಉತ್ತರ ಕೊಡುತ್ತೇವೆ ಎಂದು ಹೇಳಿದರು. ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಸೇಡಿನ ರಾಜಕಾರಣ ಎಂದು ಜಯಲಲಿತಾ ಹೇಳಿರುವುದು ಪತ್ರಿಕೆಗಳಲ್ಲಿ ಓದಿದ್ದೇನೆ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಹಾಗಾಗಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿದ್ದು, ಪೊಲೀಸ್ ಅಧಿಕಾರಿಗಳೂ ಕೂಡ ಶಾಮೀಲಾಗಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ರಹಸ್ಯ ಕಾರ್ಯಾಚರಣೆ ನಡೆದಿದ್ದು, ಅದರಲ್ಲಿ ಪೊಲೀಸ್ ಅಧಿಕಾರಿಗಳ ಹೆಸರು ಉಲ್ಲೇಖವಾಗಿದೆ. ಸಂಪೂರ್ಣ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕೆಎಫ್‌ಡಿ ಮತ್ತು ಪಿಎಫ್‌ಐ ಸಂಘಟನೆಗಳ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿರುವ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೇವಲ ಅವೆರಡೂ ಸಂಘಟನೆಗಳ ಪ್ರಕರಣಗಳ ಮೇಲಿದ್ದ ಮೊಕದ್ದಮೆಗಳನ್ನಷ್ಟೇ ಹಿಂದಕ್ಕೆ ಪಡೆದಿಲ್ಲ, ಹಿಂದೂ ಮುಖಂಡರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನೂ, ರೈತ ನಾಯಕರ ಮೇಲಿದ್ದ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ. ಇದರ ಅಧ್ಯಯನಕ್ಕಾಗಿ ಸಂಪುಟ ಉಪ ಸಮಿತಿ ರಚಿಸಲಾಗಿತ್ತು. ಸಮಿತಿಯ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Write A Comment