ಕರ್ನಾಟಕ

ಒಂದಂಕಿ ಲಾಟರಿ ಸೇರಿದಂತೆ ರಾಜ್ಯದ ಹಲವಾರು ದಂಧೆಗಳಲ್ಲಿ ಸಿದ್ದು-ಜಾರ್ಜ್; ಯಡಿಯೂರಪ್ಪ ವಾಗ್ದಾಳಿ

Pinterest LinkedIn Tumblr

yeddyurappa-siddaramaih

ಮೈಸೂರು, ಜೂ.7: ರಾಜ್ಯದಲ್ಲಿ ನಡೆದಿರುವ ಒಂದಂಕಿ ಲಾಟರಿ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಹಲವಾರು ದಂಧೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರ ನೇರ ಸಹಭಾಗಿತ್ವ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಇಂದು ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳು ರಾಜ್ಯದಲ್ಲಿ ನಡೆದಿರುವ ಹಗರಣಗಳ ಬಗ್ಗೆ ಹೋರಾಟ ಮಾಡುತ್ತಿದ್ದರೂ ಮುಖ್ಯಮಂತ್ರಿಯವರು ಭಂಡತನದಿಂದ ಕುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ ಎಂದು ಟೀಕಿಸಿದರು. ರಾಜ್ಯದಲ್ಲಿ ಇಷ್ಟೆಲ್ಲಾ ಹಗರಣಗಳು ನಡೆದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ಚು ದಿನ ಅಧಿಕಾರದಲ್ಲಿ ಮುಂದುವರಿಯುವುದಿಲ್ಲ ಎಂದ ಅವರು ಇವರ ಆಡಳಿತಾವಧಿಯಲ್ಲಿ ಕೆಪಿಎಸ್‌ಸಿ, ಅರ್ಕಾವತಿ ಬಡಾವಣೆ ಹಾಗೂ ಡಿ.ಕೆ.ರವಿ ಸಾವಿನ ಪ್ರಕರಣ ಸೇರಿದಂತೆ ಹಲವಾರು ಗಂಭೀರ ಪ್ರಕರಣಗಳು ನಡೆದಿವೆ ಎಂದರು

ತಮ್ಮ ಸರ್ಕಾರದ 2 ವರ್ಷದ ಅವಧಿಯಲ್ಲಿ 6 ಲಕ್ಷ ರೂ. ಭಾಗ್ಯಲಕ್ಷ್ಮಿ ಬಾಂಡ್ ಬಿಡುಗಡೆ ಮಾಡಿದ್ದೆವು. ಸಿದ್ದರಾಮಯ್ಯ ಅವರ 2 ವರ್ಷದ ಅಧಿಕಾರಾವಧಿಯಲ್ಲಿ 2 ಲಕ್ಷ ಬಾಂಡ್‌ಗಳನ್ನೂ ಸಹ ಕೊಟ್ಟಿಲ್ಲ, ಅವರ ತವರು ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ? ಎಂದು ಪ್ರಶ್ನಿಸಿದರು. ರಾಜ್ಯದ ಅಭಿವೃದ್ಧಿ ಕಡ ಗಮನ ಹರಿಸದೆ ಕೇವಲ ಉಡಾಫೆ ಮಾತುಗಳಲ್ಲೇ ಕಾಲ ಕಳೆಯುತ್ತಿರುವ ಮುಖ್ಯಮಂತ್ರಿಯವರು ಸಮಾಜಮುಖಿ ಕೆಲಸಕ್ಕೆ ಮುಂದಾಗಲಿ ಎಂದು ಯಡಿಯೂರಪ್ಪ ಸಲಹೆ ಮಾಡಿದರು.

Write A Comment