ಕರ್ನಾಟಕ

ಶಾಲಾ-ಕಾಲೇಜು ಬಳಿಯ 500 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ನಿಷೇಧ: ಯುಟಿ ಖಾದರ್

Pinterest LinkedIn Tumblr

Bans-Tobacco-Products-at-Sc

ಬೆಂಗಳೂರು: ಶಾಲಾ-ಕಾಲೇಜು ಬಳಿಯ ತಂಬಾಕು ಉತ್ಪನ್ನ ನಿಷೇಧಿತ ವಲಯವನ್ನು 100 ಮೀಟರ್ ನಿಂದ 500 ಮೀಟರ್ ವರೆಗೆ ವಿಸ್ತರಿಸುವ ಕುರಿತು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ಯುಟಿ ಖಾದರ್ ಅವರು, ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು 500 ಮೀಟರ್ ವಿಸ್ತರಿಸಲು ಸರ್ಕಾರ ಮುಂದಾಗಿದೆ. ಶಾಲಾ-ಕಾಲೇಜುಗಳ ನಿಷೇಧಿತ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಾಗಲಿ ಅಥವಾ ಪೋಷಕರಾಗಲಿ ದೂರು ಸಲ್ಲಿಸಿದರೆ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪ್ರಾದೇಶಿಕ ಕಾರ್ಯಾಗಾರ ಪ್ರಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್ ಅವರು, “ರಾಜ್ಯದಲ್ಲಿ ತಂಬಾಕು ಉತ್ಪನ್ನಗಳನ್ನು ನಿಯಂತ್ರಿಸಲು ಸರ್ಕಾರ ಬದ್ಧವಾಗಿದೆ. ತಂಬಾಕು ಉತ್ಪನ್ನಗಳನ್ನು ನಿಯಂತ್ರಿಸುವುದು ಹಾಗೂ ಅದರ ಮೇಲೆ ನಿಗಾ ವಹಿಸಲು ದೇಶದಲ್ಲೇ ಮೊದಲ ಬಾರಿಗೆ ಸಾಫ್ಟ್‌ವೇರ್ ಒಂದನ್ನು ಅಭಿವೃದ್ಧಿಪಡಿಸುತ್ತಿದ್ದು, ಮುಂದಿನ ತಿಂಗಳು ಇದಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಇದಲ್ಲದೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ತಿಂಗಳಿಗೊಮ್ಮೆ ಸಭೆ ಸೇರಿ ತಂಬಾಕು ಉತ್ಪನ್ನಗಳ ನಿಷೇಧ ಹಾಗೂ ಅದರ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಸಭೆ ನಡೆಸಲಿದ್ದಾರೆ. ಈ ಸಭೆಗೆ ನೂತನ ಸಾಫ್ಟ್‌ವೇರ್‌ಗೆ ನೆರವಾಗಲಿದೆ ಎಂದು ಅವರು ಹೇಳಿದರು.

Write A Comment