ಕರ್ನಾಟಕ

ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷೆ ಯಾಗಿ ಲಕ್ಷ್ಮಿಹೆಬ್ಬಾಳ್ಕರ್

Pinterest LinkedIn Tumblr

Laxmi-hebbalkar--photo_new

ಬೆಂಗಳೂರು, ಜೂ.12-ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಮಹಿಳಾ ಸಂಘಟನೆಯನ್ನು ಬಲಪಡಿಸುವುದಾಗಿ ರಾಜ್ಯ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷೆ ಲಕ್ಷ್ಮಿ  ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಅಧಿಕಾರ ಸ್ವೀಕಾರಕ್ಕೂ ಮುನ್ನ ಮಾತನಾಡಿದ ಅವರು, ಪಕ್ಷಕ್ಕೆ ಮಹಿಳೆಯರ ಕೊಡುಗೆ ಅಪಾರವಾಗಿದೆ.

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಇರುವುದರಿಂದ ಅಲ್ಲಿ ಆಯ್ಕೆಯಾಗುವ ಪ್ರತಿನಿಧಿಗಳಿಗೆ ಆಡಳಿತಾತ್ಮಕ ತರಬೇತಿ ನೀಡಿ ಉತ್ತಮ ಆಡಳಿತಗಾರರನ್ನಾಗಿ ರೂಪಿಸಲು ಶ್ರಮಿಸಲಾಗುವುದು ಎಂದು ಹೇಳಿದರು. ಪಕ್ಷದ ನಾಯಕರು ನಮ್ಮ ಮೇಲಿಟ್ಟಿರುವ ಭರವಸೆಯನ್ನು ಉಳಿಸಿಕೊಳ್ಳುತ್ತೇನೆ. ಮುಂದಿನ 2018ರ  ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಸಂಘಟನೆ ಮಾಡಲಾಗುವುದು. ರಾಜ್ಯ ಸರ್ಕಾರದ ನೂರಾರು ಜನಪರ ಯೋಜನೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಜತೆಗೆ ಪಕ್ಷ ಸಂಘಟನೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಬಿಜೆಪಿಯಲ್ಲಿ ಮಹಿಳೆಯರಿಗೆ ಆದ್ಯತೆ ಸಿಗುತ್ತಿಲ್ಲ. ಕಾಂಗ್ರೆಸ್‌ನಲ್ಲಿ ಮಾತ್ರ ಸಾಮಾಜಿಕ ನ್ಯಾಯ ಹಾಗೂ ಎಲ್ಲಾ ವರ್ಗಗಳಿಗೂ ಮಾನ್ಯತೆ ಸಿಗಲು ಸಾಧ್ಯ ಎಂದು ಅವರು ಹೇಳಿದರು.

Write A Comment