ಕರ್ನಾಟಕ

ಬಿಜೆಪಿಗೆ ನಟ ‘ಬುಲೆಟ್’ ಪ್ರಕಾಶ್ ಎಂಟ್ರಿ; ನಾಳೆ ಅಧಿಕೃತ ಸೇರ್ಪಡೆ

Pinterest LinkedIn Tumblr

bullet prakash

ಬೆಂಗಳೂರು, ಜೂ.13: ಕನ್ನಡ ಚಲನಚಿತ್ರರಂಗದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹಾಸ್ಯನಟ ಬುಲೆಟ್ ಪ್ರಕಾಶ್ ನಾಳೆ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಳ್ಳುತ್ತಿದ್ದು, ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಸಮ್ಮುಖದಲ್ಲಿ ಪ್ರಾಥಮಿಕ ಸದಸ್ಯತ್ವ ಪಕ್ಷ ಪಡೆಯಲಿದ್ದಾರೆ.

ಜೆಡಿಎಸ್‌ನಿಂದ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದ ಪ್ರಕಾಶ್‌ಗೆ ಟಿಕೆಟ್ ಸಿಗದೆ ಹಿಂದೆ ಸರಿದಿದ್ದರು. ಇದೀಗ ನರೇಂದ್ರ ಮೋದಿಯವರು ನೇತೃತ್ವವನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ನನ್ನ ತಾಯಿ ಕೂಡ ಪಕ್ಷದ ಕಾರ್ಯಕರ್ತರಾಗಿದ್ದರು. ನನಗೂ ಪಕ್ಷದ ಬಗ್ಗೆ ಒಲವಿರುವುದರಿಂದ ಸೇರ್ಪಡೆಯಾಗುತ್ತಿದ್ದು, ನನಗೆ ಯಾವುದೇ ಸ್ಥಾನಮಾನ ಬೇಕಿಲ್ಲ. ಪಕ್ಷದ ಕಚೇರಿಯಲ್ಲಿ ಕಸ ಗುಡಿಸುವ ಕೆಲಸ ಕೊಟ್ಟರೂ ಮಾಡುತ್ತೇನೆ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಹೇಳಿಕೊಂಡಿದ್ದಾರೆ.

Write A Comment