ಕರ್ನಾಟಕ

ರಾಜ್ಯ ಸರ್ಕಾರ ಭ್ರಷ್ಟರಿಗೆ ಕುಮ್ಮಕ್ಕು ನೀಡುತ್ತಿದೆ : ಶೆಟ್ಟರ್

Pinterest LinkedIn Tumblr

Sidd-and-Shetter

ಬೆಂಗಳೂರು,ಜೂ.15: ಭ್ರಷ್ಟಾಚಾರ ಆರೋಪವಿರುವ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಲು ಲೋಕಾಯುಕ್ತ ಶಿಫಾರಸ್ಸನ್ನು ರದ್ದು ಮಾಡುವ ಮೂಲಕ ಭ್ರಷ್ಟರಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಲು ಅನುಮತಿ ಕೊಡಬೇಕೆಂದು ಲೋಕಾಯುಕ್ತ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಆದರೆ ಅದನ್ನು ತಿರಸ್ಕರಿಸಿರುವುದು ಭ್ರಷ್ಟರವನ್ನು ಸರ್ಕಾರವೇ ರಕ್ಷಣೆ ಮಾಡಲು ಹೊರಟಿದೆ ಎಂದು ಟೀಕಿಸಿದರು.

ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಭ್ರಷ್ಟರನ್ನೇ ರಕ್ಷಣೆ ಮಾಡಲು ಹೊರಟಿರುವುದು ದುರದೃಷ್ಟಕರ! ಮತ್ತು ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆ ಎಂದರು.

ಬೆಳಗಾವಿಯಲ್ಲಿ ಹೋರಾಟ: ಇದೇ 29ರಂದು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕಬ್ಬು ಬೆಳೆಗಾರರ ಬಾಕಿ ಬಿಡುಗಡೆ ಮತ್ತು ಯಲ್ಲಾಲಿಂಗನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಆರೋಪ ಎದುರಿಸುತ್ತಿರುವ ಶಿವರಾಜ್ ತಂಗಡಗಿಯನ್ನು ಸಚಿವ ಸಂಪುಟದಿಂದ ಕೈಬಿಡುವ ಕುರಿತು ಪ್ರಚಲಿತ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸುತ್ತೇವೆ. ಇದಕ್ಕಾಗಿ ನಾವು ಸರ್ಕಾರದ ಕಣ್ತೆರೆಸಲು ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು. ಕಬ್ಬು ಬೆಳೆಗಾರರಿಗೆ 4,600 ಕೋಟಿ ರೂ. ನೀಡಬೇಕು, ರೈತರು ತೀವ್ರ ಕಂಗಾಲಾಗಿದ್ದು , ಸರ್ಕಾರ ಸಹಾಯ ಹಸ್ತ ನೀಡಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ ಸರ್ಕಾರ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಶಾಮೀಲಾಗಿದ್ದು, ರೈತರನ್ನು ಕಡೆಗಣಿಸಿದೆ ಎಂದು ಕಿಡಿಕಾರಿದರು.

ಈ ಹಿಂದಿನ ರಾಜ್ಯ ಸರ್ಕಾರದ ಭರವಸೆಯಂತೆ ರೈತರ ಬಾಕಿ ಹಣವನ್ನು ಸಂದಾಯ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರ್ಕಾರ ಮತ್ತು ಕಾರ್ಖಾನೆಗಳ ನಿರ್ಲಕ್ಷ್ಯದಿಂದ ರೈತರ ಸರಣಿ ಆತ್ಮಹತ್ಯೆ ಮತ್ತೆ ಆರಂಭವಾಗಿದೆ. ಸಚಿವರು ಕೇವಲ ಭರವಸೆಗಳನ್ನಷ್ಟೇ ನೀಡುತ್ತಿದ್ದಾರೆ ಹೊರತು ಬಾಕಿ ಹಣ ನೀಡುತ್ತಿಲ್ಲ. ತಕ್ಷಣವೇ ಬಾಕಿ ಹಣ ನೀಡಬೇಕು. ಇಲ್ಲದಿದ್ದರೆ ಅಧಿವೇಶನದ ಸಮಯದಲ್ಲಿ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು. ಮಲಪ್ರಭ ಸಕ್ಕರೆ ಕಾರ್ಖಾನೆಯಿಂದ ರೈತ ಗುರುನಾಥ ಚಾಪಗಾವಿಗೆ 78 ಸಾವಿರ ಹಣ ಬರಬೇಕಿತ್ತು. ಸಕಾಲಕ್ಕೆ ಕಾರ್ಖಾನೆ ಹಣ ನೀಡದ ಕಾರಣ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನೆ ತುಳಿತಕ್ಕೆ ಸಿಲುಕಿ ಸತ್ತರೆ 5 ಲಕ್ಷ ಪರಿಹಾರ ಕೊಡುವ ಸರ್ಕಾರ ರೈತ ಸತ್ತರೆ ಒಂದು ಲಕ್ಷ ರೂ. ಪರಿಹಾರ ನೀಡುತ್ತದೆ. ತಕ್ಷಣವೇ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿದರು.

ರಾಜ್ಯಪಾಲರು ಕಾರ್ಯಾಂ ಗದ ಮುಖ್ಯಸ್ಥರಾಗಿ ಸಂವಿಧಾನದ ಆಶಯದಂತೆ ಆಡಳಿತ ನಡೆಸುತ್ತಾರೆ. ಮುಖ್ಯಮಂತ್ರಿಗಳು ಅವರ ಜೊತೆ ಉತ್ತಮ ಹೊಂದಬೇಕು. ಆದರೆ ಸಿದ್ದರಾಮಯ್ಯನವರು ರಾಜ್ಯಪಾಲರೊಂದಿಗೆ ಸಂಘರ್ಷಕ್ಕಿಳಿಯುತ್ತಿರುವುದು ತಪ್ಪು ಎಂದರು.  ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ರಂತೆ ರಾಜ್ಯಪಾಲರ ಜೊತೆ ಸಂಘರ್ಷಕ್ಕಿಳಿಯುವುದು ಬೇಡ. ರಾಜ್ಯಪಾಲರೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳಬೇಕು ಎಂದರು.

Write A Comment