ಕರ್ನಾಟಕ

ರಾಮಮಂದಿರ, ಆರ್ಟಿಕಲ್ 370 ಬಿಜೆಪಿ ಅಜೆಂಡ… ಆದರೆ ಅಭಿವೃದ್ಧಿಗೆ ಹೆಚ್ಚಿನ ಗಮನ: ಸದಾನಂದ ಗೌಡ

Pinterest LinkedIn Tumblr

Dv_Sadananda_Gowda

ನವದೆಹಲಿ: ರಾಮಮಂದಿರ ನಿರ್ಮಾಣ, ಆರ್ಟಿಕಲ್ 370 ರದ್ದುಗೊಳಿಸುವುದು ಬಿಜೆಪಿಯ ಕಾರ್ಯಸೂಚಿಗಳಾಗಿವೆ ಆದರೆ ದೀರ್ಘ ಸಮಾಲೋಚನೆ ಬಳಿಕ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣ, ಆರ್ಟಿಕಲ್ 370 ರದ್ದುಗೊಳಿಸುವುದಕ್ಕಿಂತಲೂ ಕಳೆದ 10 ವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾಗಿದ್ದ ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ವಿಷಯದಲ್ಲಿ ನರೇಂದ್ರ ಮೋದಿ ಸರ್ಕಾರ ಹೆಚ್ಚಿನ ಗಮನ ಹರಿಸುತ್ತಿದೆ ಎಂದು ಸದಾನಂದ ಗೌಡ ಹೇಳಿದ್ದಾರೆ.

ಆರ್ಟಿಕಲ್ 370 ರದ್ದುಗೊಳಿಸುವುದು ಬಿಜೆಪಿಯ ಪ್ರಣಾಳಿಕೆಯಲ್ಲಿನ ಭರವಸೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅದು ಬಿಜೆಪಿ ಕಾರ್ಯಸೂಚಿ ವಿಷಯವೂ ಆಗಿದೆ ಎಂದು ಈ ಹಿಂದೆಯೇ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿರುವುದಾಗಿ ಸದಾನಂದ ಗೌಡ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನ ವಾಪಸ್ ಪಡೆಯುವ ಬಗ್ಗೆ ಹಲವು ರಾಜಕೀಯ ಪಕ್ಷಗಳೊಂದಿಗೆ ಸುದೀರ್ಘ ಚರ್ಚೆ ನಡೆಸಬೇಕಿದೆ ಆ ಬಳಿಕವೇ ಅಂತಿಮ ನಿರ್ಧಾರವೆಂದು ಕಾನೂನು ಸಚಿವರು ಸ್ಪಷ್ಟಪಡಿಸಿದ್ದಾರೆ.

ಸೂಕ್ಷ್ಮ ವಿಚಾರಗಳಲ್ಲಿ ಆತುರದ ನಿರ್ಧಾರ ಕೈಗೊಳ್ಳುವುದಕ್ಕೆ ಸಾಧ್ಯವಿಲ್ಲ, ನಿಧಾನವಾಗಿ ಈ ವಿಷಯಗಳ ಬಗ್ಗೆ ಗಮನ ಹರಿಸುತ್ತೇವೆ, ಆದ್ದರಿಂದ ಬಿಜೆಪಿ ತನ್ನ ಕಾರ್ಯಸೂಚಿ(ಅಜೆಂಡಾ)ಗಳನ್ನು ಮರೆತಿಲ್ಲ. ಕಳೆದ 10 ವರ್ಷಗಳಲ್ಲಿ ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ಸಂಪೂರ್ಣವಾಗಿ ನಿರ್ಲಕ್ಷ್ಯಕ್ಕೊಳಗಾಗಿದ್ದರಿಂದ ಈಗ ಅದನ್ನು ಪುನಶ್ಚೇತನಗೊಳಿಸುವ ತುರ್ತು ಅಗತ್ಯವಿದೆ ಎಂದು ಸದಾನಂದ ಗೌಡ ಅಭಿಪ್ರಾಯಪಟ್ಟಿದ್ದಾರೆ.

Write A Comment