ಕರ್ನಾಟಕ

ಸಾಧನೆ ಮಾಡಿದ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿ

Pinterest LinkedIn Tumblr

Award-nbationa

ಬೆಂಗಳೂರು, ಜೂ.17-ಕಲೆ, ಸಂಸ್ಕೃತಿ, ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ರಾಷ್ಟ್ರೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜ ಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ತಕ್ಕಂತೆ  ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವಂತಹ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಯನ್ನು ಭಾರತ ಸರ್ಕಾರವು ನೀಡುತ್ತದೆ.

ಭಾರತದಲ್ಲಿ ನೆಲೆಸಿರುವ ಮತ್ತು ಮೇಲ್ಕಂಡ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವ      9 ರಿಂದ 16 ವರ್ಷದೊಳಗಿನ ಅಂದರೆ   01.08.1999 ಹಾಗೂ ನಂತರ ಹುಟ್ಟಿದ ಮಕ್ಕಳನ್ನು 2015ನೇ ವರ್ಷಕ್ಕೆ ಆಯ್ಕೆ ಮಾಡಲಾಗುವುದು.  ಈ ರಾಷ್ಟ್ರ ಮಟ್ಟದ ಪ್ರಶಸ್ತಿಯು ಒಂದು ಚಿನ್ನದ ಪದಕ,  20 ಸಾವಿರ ರೂ.ಗಳ ನಗದು,  10 ಸಾವಿರ ರೂ. ಮೌಲ್ಯದ ಪುಸ್ತಕ ವೋಚರ್ ಮತ್ತು ಪ್ರಶಸ್ತಿ ಪತ್ರ ಹಾಗೂ 35 ಬೆಳ್ಳಿ ಪದಕ (ಪ್ರತಿ ರಾಜ್ಯ ಕೇಂದ್ರಾಡಳಿತ ಪ್ರದೇಶಕ್ಕೆ ಒಂದು ಬೆಳ್ಳಿ ಪದಕ)10 ಸಾವಿರ ರೂ.  ನಗದು,  3ಸಾವಿರ ರೂ.ಗಳ ಮೌಲ್ಯದ ಪುಸ್ತಕ ವೋಚರ್ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಅಸಾಧಾರಣವೆಂದು ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.  2015 ನೇ ವರ್ಷದ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇಲ್ಲಿಂದ ಪಡೆದು, ಆಂಗ್ಲ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 4ರೊಳಗೆ ತಲುಪುವಂತೆ ಸಂಬಂಧಪಟ್ಟ ಜಿಲ್ಲಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರಿಗೆ ಕಳುಹಿಸತಕ್ಕದ್ದು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

Write A Comment