ಕರ್ನಾಟಕ

ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಆರೋಪಿಗಳ ಬಂಧನ

Pinterest LinkedIn Tumblr

gang rape

ಬೆಂಗಳೂರು: ಪ್ರೀತಿಸುವ ನಾಟಕವಾಡಿ ಪ್ರಿಯತಮ ತನ್ನ ಇನ್ನಿಬ್ಬರು ಸ್ನೇಹಿತರೊಂದಿಗೆ ಸೇರಿ, ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.

ಜೆ.ಪಿನಗರ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೂವರು ಆರೋಪಿಗಳನ್ನು ಜೆ.ಪಿ.ನಗರ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಅಸಾಯ್ 14 ವರ್ಷದ ಅಪ್ರಾಪ್ತೆ ಜತೆ ಪ್ರೀತಿಸುವ ನಾಟಕವಾಡಿದ್ದ. ನಿನ್ನೆ ರಾತ್ರಿ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದ ತನ್ನ ಇನ್ನಿಬ್ಬರು ಸ್ನೇಹಿತರೊಂದಿಗೆ ಸೇರಿ, ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ. ಮತ್ತಿಬ್ಬರು ಆರೋಪಿಗಳಾದ ಸಂತೋಷ್ ಹಾಗೂ ಅಜಯ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಲೈಂಗಿಕ ದೌರ್ಜನ್ಯ ನಡೆದಿದೆ: 14 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ.. ಈಗಾಗ್ಲೇ ಮೂವರು ಯುವಕರನ್ನು ಬಂಧಿಸಲಾಗಿದೆ ಅಂತಾ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಹೇಳಿದ್ದಾರೆ. ಬಂಧಿತ ಆರೋಪಿಗಳಲ್ಲಿ ಅಸಾಯ್ ಪ್ರಮುಖ ಆರೋಪಿ. ಮೂವರು ತಮಿಳುನಾಡು ಮೂಲದವರು ಎಂದು ಗೊತ್ತಾಗಿದೆ. ಬೆಂಗಳೂರಲ್ಲಿ ರಾಗಿಗುಡ್ಡದಲ್ಲಿ ಮನೆ ಮಾಡಿಕೊಂಡಿದ್ದರು. ಜೆ.,ಪಿ.ನಗರ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ ಅಂತಾ ಹೇಳಿದ್ದಾರೆ.

Write A Comment