ಕರ್ನಾಟಕ

ಬಿಬಿಎಂಪಿ ಚುನಾವಣೆ ಮುಂದೂಡುವುದಿಲ್ಲ : ಎಸ್.ಆರ್.ಪಾಟೀಲ್

Pinterest LinkedIn Tumblr

BBMP

ಬೆಂಗಳೂರು, ಜೂ.18- ಬಿಬಿಎಂಪಿ ವಿಭಜನೆಗೆ ರಚಿಸಲಾಗಿರುವ ವಿಧಾನಪರಿಷತ್‌ನ ಆಯ್ಕೆ ಸಮಿತಿ ಶೀಘ್ರವೇ ತನ್ನ ವರದಿ ನೀಡಲಿದೆ. ಆದರೆ ಈ ವರದಿ ಮುಂದಿಟ್ಟು ಬಿಬಿಎಂಪಿ ಚುನಾವಣೆ ಮುಂದೂಡುವುದಿಲ್ಲ ಎಂದು ಸಚಿವ ಎಸ್.ಆರ್.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ನೇತೃತ್ವದ ಆಯ್ಕೆ ಸಮಿತಿ ಈಗಾಗಲೇ ನಾಲ್ಕು ಸಭೆಗಳನ್ನು ನಡೆಸಿದ್ದು, ಇಂದು 5ನೇ ಸಭೆ ನಡೆಯಲಿದೆ.  ಬಿಬಿಎಂಪಿ ವಿಭಜನೆ ಕುರಿತು ಅಧ್ಯಯನ ನಡೆಸಲು ಅಧಿಕಾರಿಗಳ ತಂಡವನ್ನು ದೆಹಲಿ, ಚೆನ್ನೈ, ಮುಂಬೈ ಮತ್ತಿತರ ನಗರಗಳಿಗೆ ಕಳುಹಿಸಲಾಗಿತ್ತು. ಅದರ ಅಧ್ಯಯನ ವರದಿ ಸಿದ್ಧವಾಗಿದೆ.  ಬಿಬಿಎಂಪಿ ವಿಭಜನೆಗಾಗಿ ಸರ್ಕಾರ ರಚಿಸಿದ್ದ ಮೂರು ಜನರ ಸಮಿತಿ ಮುಖ್ಯಸ್ಥರಾಗಿದ್ದ ಪಾಟೀಲ್ ಅವರನ್ನು ಸಭೆಗೆ ಆಹ್ವಾನಿಸಲಾಗಿದೆ.

ಎಲ್ಲಾ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಆಯ್ಕೆ ಸಮಿತಿ ಶೀಘ್ರವೇ ವರದಿ ನೀಡಲಿದೆ ಎಂದು ಹೇಳಿದರು. ಆಯ್ಕೆ ಸಮಿತಿಯನ್ನು ಆಧಾರವಾಗಿಟ್ಟುಕೊಂಡು ಬಿಬಿಎಂಪಿ ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನದಂತೆ ನಿಗದಿತ ಅವಧಿಯಲ್ಲೇ ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಬಿಬಿಎಂಪಿ ವಿಭಜನೆಗೆ ಮುಂದಾಗಿದ್ದ ರಾಜ್ಯ ಸರ್ಕಾರ ವಿಧಾನ ಮಂಡಳದಲ್ಲಿ ಮುನಿಸಿಪಲ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡಿಸಿತ್ತು. ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಕಾಯ್ದೆಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಸಂಖ್ಯಾಬಲದ ಕೊರತೆಯಿಂದ ಸರ್ಕಾರ ಅಸಹಾಯಕವಾಗಿತ್ತು. ಆ ಸಂದರ್ಭದಲ್ಲಿ ಮಸೂದೆಯನ್ನು ಆಯ್ಕೆ ಸಮಿತಿಗೆ ಒಪ್ಪಿಸುವ ಪ್ರತಿಪಕ್ಷ ರೂಲಿಂಗ್‌ಗೆ ನೀಡಿದರು. ಅದರಂತೆ ಎಸ್.ಆರ್.ಪಾಟೀಲ್ ನೇತೃತ್ವದಲ್ಲಿ ಆಯ್ಕೆ ಸಮಿತಿ

Write A Comment