ಕರ್ನಾಟಕ

ಯುವತಿಯನ್ನು ರೇಪ್ ಮಾಡಿ ರೈಲಿನ ಹಳಿಗೆ ಎಸೆದ ಕಾಮುಕರು…?

Pinterest LinkedIn Tumblr

5238Girl-raped1

ಇತ್ತೀಚೆಗೆ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಎಗ್ಗಿಲ್ಲದಂತೆ ಸಾಗಿದ್ದು ಇದಕ್ಕೆ ನಿದರ್ಶನವೆಂಬಂತೆ 25ವರ್ಷದ ಯುವತಿಯನ್ನು ಅತ್ಯಾಚಾರ ನಡೆಸಿ ರೈಲ್ವೆ ಹಳಿಯ ಮೇಲೆ ಎಸೆದು ಹೋದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಮಂಡ್ಯದ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಬಳಿಯಲ್ಲಿನ ರೈಲ್ವೆ ಹಳಿಯ ಮೇಲೆ ಯುವತಿಯ ಮೃತ ದೇಹ ಪತ್ತೆಯಾಗಿದ್ದು ಕಾಮುಕರು ಅತ್ಯಾಚಾರ ನಡೆಸಿ ಕುತ್ತಿಗೆ ಹಿಸುಕಿ ಹತ್ಯೆ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಅಲ್ಲದೇ ಯುವತಿಯ ದೇಹದ ಮೇಲೆ ಯಾವುದೇ ಗಾಯಗಳಾಗಿಲ್ಲ ಎನ್ನಲಾಗಿದ್ದು ಸಾಕ್ಷಿ ನಾಶ ಮಾಡುವ ನಿಟ್ಟಿನಲ್ಲಿ ಆಕೆಯನ್ನು ರೈಲು ಹಳಿಗೆ ಎಸೆದಿದ್ದಾರೆ ಎನ್ನಲಾಗುತ್ತಿದೆ.

ಈಗಾಗಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಮುಕರ ಪತ್ತೆಗೆ ಮುಂದಾಗಿದ್ದಾರೆ ಎಂಬ ಮಾಹಿತ್ಯಿ ಲಭ್ಯವಾಗಿದೆ.

Write A Comment