ಕರ್ನಾಟಕ

ಆ.5ರೊಳಗೆ ಬಿಬಿಎಂಪಿ ಚುನಾವಣೆ: ಚು.ಆಯೋಗಕ್ಕೆ ಹೈಕೋರ್ಟ್ ಸೂಚನೆ

Pinterest LinkedIn Tumblr

BBMP

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸೋಮವಾರ ರಾಜ್ಯ ಸರಕಾರಕ್ಕೆ ಚಾಟಿ ಬೀಸಿದ್ದು, ಸುಪ್ರೀಂ ಕೋರ್ಟ್ ಆದೇಶದಂತೆ ಆಗಸ್ಟ್ 5ರೊಳಗೆ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ.

2011ರ ಜನಗಣತಿ ಆಧಾರದಲ್ಲಿ ವಾರ್ಡ್ ವಿಂಗಡಣೆ ಮಾಡಿದ ಬಳಿಕವಷ್ಟೇ ಚುನಾವಣೆ ನಡೆಸಲು ಅನುಮತಿ ನೀಡುವಂತೆ ರಾಜ್ಯ ಸರಕಾರವು ಹೈಕೋರ್ಟಿಗೆ ಮನವಿ ಸಲ್ಲಿಸಿತ್ತು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದಷ್ಟೇ ಅಲ್ಲದೆ, ಸರಕಾರಕ್ಕೆ ದಂಡವನ್ನೂ ವಿಧಿಸಿದೆ.

ಸುಪ್ರೀಂ ಕೋರ್ಟ್ ಸೂಚಿಸಿರುವಂತೆ ಆಗಸ್ಟ್ 5ರೊಳಗೆ ಚುನಾವಣೆ ನಡೆಸಬೇಕೆಂದು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚಿಸಿದ್ದು, ಚುನಾವಣೆ ಮುಂದೂಡುವ ಪ್ರಯತ್ನಕ್ಕೆ ತೀವ್ರ ಹಿನ್ನಡೆಯಾಗಿದೆ.

Write A Comment