ಕರ್ನಾಟಕ

ಕನ್ನಡ ಚಿತ್ರ ನಟ ಯಶ್ ಮನೆಗೆ ಹುಸಿ ಬಾಂಬ್ ಕರೆ ಮಾಡಿ ಆತಂಕ ಸೃಷ್ಟಿಸಿದ ಕಿಡಿಗೇಡಿ

Pinterest LinkedIn Tumblr

yash

ಬೆಂಗಳೂರು: ಕನ್ನಡ ಚಿತ್ರ ನಟ ಯಶ್ ಮನೆಗೆ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 100ಕ್ಕೆ ಕರೆ ಮಾಡಿದ ಕಿಡಿಗೇಡಿಯೊಬ್ಬ ಆತಂಕ ಸೃಷ್ಟಿಸಿದ್ದ ಘಟನೆ ನಡೆದಿದೆ.

ಕಳೆದ ಭಾನುವಾರ ಸಂಜೆ 7.30ರ ಸುಮಾರಿಗೆ ಮೊಬೈಲ್ ಫೋನ್‍ನಿಂದ ಕರೆ ಮಾಡಿದ ವ್ಯಕ್ತಿಯೊಬ್ಬ ನಟ ಯಶ್ ಮನೆಗೆ ಬಾಂಬ್ ಇಡಲಾಗಿದ್ದು, ಕೆಲವೇ ಕ್ಷಣದಲ್ಲಿ ಸ್ಪೋಟಗೊಳ್ಳಲಿದೆ ಎಂದು ಹೇಳಿದ್ದ.

ಕೂಡಲೇ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಹಾಗೂ ಬಾಂಬ್ ಪತ್ತೆ ದಳ ಸಿಬ್ಬಂದಿ ಯಶ್ ಮನೆಗೆ ಧಾವಿಸಿ ಪರಿಶೀಲನೆ ನಡೆಸಿದಾಗ ಸ್ಪೋಟಕಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಹುಸಿ ಕರೆ ಮಾಡಿದ ಕಿಡಿಗೇಡಿಯ ಮೊಬೈಲ್ ಸಂಖ್ಯೆ ಆಧಾರದ ಮೇಲೆ ಆತನ ಬಂಧನಕ್ಕೆ ಕಾರ್ಯಾಚರಣೆ ಮುಂದು ವರಿದಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment