ಕರ್ನಾಟಕ

ಲೋಕಾಯುಕ್ತರ ಪುತ್ರ ಅಶ್ವಿನ್ ರಾವ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಆಪ್ ದೂರು

Pinterest LinkedIn Tumblr

Lokayukta274ಬೆಂಗಳೂರು: ಲೋಕಾಯುಕ್ತದಲ್ಲಿ ಭ್ರಷ್ಚಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸೂಕ್ತ ತನಿಖೆಗೆ ಆಗ್ರಹಿಸಿ ಹೋರಾಟ ಮುಂದುವರೆಸಿದರುವ ರಾಜ್ಯ ಆಮ್ ಆದ್ಮಿ ಪಕ್ಷ ಸೋಮವಾರ ಲೋಕಾಯುಕ್ತ ಪ್ರಕರಣ ಸಂಬಂಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಲೋಕಾಯುಕ್ತ ಕಛೇರಿಯಲ್ಲಿ ಹಣದ ಬೇಡಿಕೆಯಿಟ್ಟಿದ್ದ ಎನ್ನಲಾದ ಕೃಷ್ಣರಾವ್ ಮತ್ತು ಲೋಕಾಯುಕ್ತರ ಪುತ್ರ ಅಶ್ವಿನ್ ರಾವ್ ವಿರುದ್ಧ ಆಪ್ ನಾಯಕ ರವಿಕೃಷ್ಣಾ ರೆಡ್ಡಿ ಮತ್ತು ಸಿದ್ಧಾಂತ್ ಶರ್ಮಾ ಅವರು ಸೋಮವಾರ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರೂ ದಾಖಲಿಸಿದ್ದಾರೆ. ಲೋಕಾಯುಕ್ತರ ಅಧಿಕೃತ ನಿವಾಸವನ್ನು ಲಂಚ ಅವ್ಯವಹಾರ ನಡೆಸಲು ಬಳಸಿಕೊಂಡಿದ್ದಾರೆ ಎಂದು ಆಪಾದಿಸಲಾಗಿದೆ.

ಅಶ್ವಿನ್ ರಾವ್ ಮತ್ತು ಕೃಷ್ಣರಾವ್ ಎಂಬುವವರು ಹಿರಿಯ ಸರ್ಕಾರಿ ಅಧಿಕಾರಿಯನ್ನು ಲೋಕಾಯುಕ್ತರ ಅಧಿಕೃತ ನಿವಾಸಕ್ಕೆ ಕರೆಸಿಕೊಂಡು ಬೆದರಿಕೆ ಹಾಕಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಆರೋಪಗಳು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ನಡೆಯುತ್ತಿರುವ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆ ನಡೆಸಿ, ಸಂಸ್ಥೆಗೆ ಕಳಂಕ ತರುತ್ತಿರುವಂತಹ ಆರೋಪಿಗಳನ್ನು ಹಿಡಿದು ಶಿಕ್ಷಿಸಬೇಕು ಎಂದು ಮನವಿ ಮಾಡಿದ್ದಾರೆ.

ಕೃಷ್ಣರಾವ್ ಎಂಬ ವ್ಯಕ್ತಿ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಇಂಜಿನಿಯರ್ ಕೃಷ್ಣಮೂರ್ತಿ ಎಂಬುವವರನ್ನು ಲೋಕಾಯುಕ್ತ ಕಚೇರಿಗೆ ಕರೆಸಿಕೊಂಡು ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ 2015ರ ಮೇ 11ರಂದು ಲೋಕಾಯುಕ್ತ ರಿಜಿಸ್ಟ್ರಾರ್ ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆಯೂ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

Write A Comment