ಕರ್ನಾಟಕ

ಬಿಬಿಎಂಪಿ ಚುನಾವಣೆಯಲ್ಲಿ ಒಂದಾಗಿ ಕನ್ನಡಪರ ಸಂಘಟನೆಗಳು ಸ್ಪರ್ಧಿಸಲು ವಾಟಾಳ್ ಕರೆ

Pinterest LinkedIn Tumblr

vatal

ಬೆಂಗಳೂರು, ಜು.2: ಬಿಬಿಎಂಪಿ ಚುನಾವಣೆಯಲ್ಲಿ ವೈಯಕ್ತಿಕ ಪ್ರತಿಷ್ಠೆಗಳನ್ನು ಮರೆತು ಎಲ್ಲಾ ಕನ್ನಡಪರ ಸಂಘಟನೆಗಳು ಒಂದಾಗಿ ಕಣಕ್ಕಿಳಿಯುವ ಮೂಲಕ ಬಿಬಿಎಂಪಿಯಲ್ಲಿ ಕನ್ನಡ ಧ್ವಜ ಹಾರಿಸಬೇಕೆಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದಿಲ್ಲಿ ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಮಹಾನಗರ ಅನ್ಯಭಾಷಿಗರ ಪಾಲಾಗುತ್ತಿದೆ. ಕನ್ನಡಿಗರು ಒಗ್ಗಟ್ಟಾಗದಿದ್ದರೆ ಕನ್ನಡಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. ಹಾಗಾಗಿ ಎಲ್ಲಾ ಕನ್ನಡಪರ ಸಂಘಟನೆಗಳು ಒಟ್ಟಾಗಿ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು. 198 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು. ಕನ್ನಡದ ಪರವಾಗಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಒಕ್ಕೂಟದ ವತಿಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ವಾಟಾಳ್ ಹೇಳಿದರು.

ಬೆಂಗಳೂರು ಮಹಾನಗರದಲ್ಲಿ ಕನ್ನಡ ಮಾಯವಾಗುತ್ತಿದೆ. ಕನ್ನಡಪರ ಸಂಘಟನೆಗಳ ನಿರಂತರ ಹೋರಾಟದಿಂದ ಕನ್ನಡ ಉಳಿದಿದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಕನ್ನಡತನವನ್ನು ಮೆರೆಯಬೇಕಾಗಿದೆ ಎಂದರು. ತಮ್ಮ ಅಸ್ಥಿತ್ವವನ್ನು ಉಳಿಸಿಕೊಳ್ಳಲು ಎಲ್ಲಾ 198 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಬೇಕು. ಇದಕ್ಕಾಗಿ ಎಲ್ಲಾ ಕನ್ನಡಪರ ಸಂಘಟನೆಗಳು ಒಗ್ಗೂಡಬೇಕೆಂದು ಕರೆ ನೀಡಿದರು.

Write A Comment