ಕರ್ನಾಟಕ

ಲೋಕಾಯುಕ್ತ ನ್ಯಾ. ಭಾಸ್ಕರ್ ರಾವ್ ಪದಚ್ಯುತಿಗೆ ಪ್ರತಿಪಕ್ಷಗಳಿಂದ ನಿಲುವಳಿ ಮಂಡನೆ

Pinterest LinkedIn Tumblr

bjpಬೆಳಗಾವಿ: ತಮ್ಮ ಪುತ್ರ ಅಶ್ವಿನ್ ರಾವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಸಂಬಂಧ ತೀವ್ರ ಟೀಕೆಗೆ ಗುರಿಯಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ವಿರುದ್ಧ ಸೋಮವಾರ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ.

ತಮ್ಮ ಪುತ್ರನ ವಿರುದ್ಧವೇ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರಾಕರಿಸಿರುವ ನ್ಯಾ.ಭಾಸ್ಕರ್ ರಾವ್ ಅವರ ಪದಚ್ಯುತಿಗೆ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಸ್ ನಿಲುವಳಿ ಸೂಚನೆ ಮಂಡಿಸಲು ಮುಂದಾಗಿವೆ.

ನ್ಯಾ. ಭಾಸ್ಕರ್ ರಾವ್ ಪದಚ್ಯುತಿಗೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕರು, ಈ ಸಂಬಂಧ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಿಂದ ಸಹಿ ಸಂಗ್ರಹಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಅಲ್ಲದೆ ಆತ್ಮಸಾಕ್ಷಿ ಇರುವ ಕಾಂಗ್ರೆಸ್ ಶಾಸಕರು ಇದಕ್ಕೆ ಸಹಿ ಹಾಕಲಿ ಎಂದಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಶೆಟ್ಟರ್, ರಾಜ್ಯ ಸರ್ಕಾರ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಪಲಾಯಾನ ಮಾಡುತ್ತಿದೆ ಎಂದರು.

Write A Comment