ಕರ್ನಾಟಕ

ಆತ್ಮಹತ್ಯೆ ಮಾಡಿಕೊಂಡವರೆಲ್ಲ ಕಬ್ಬು ಬೆಳೆಗಾರರಲ್ಲ: ಸಿಎಂ ಸಿದ್ದರಾಮಯ್ಯ

Pinterest LinkedIn Tumblr

sidduಬಳ್ಳಾರಿ: ಆರ್ಥಿಕ ಸಂಕಷ್ಟ ಹಾಗೂ ಸಾಲ ಬಾಧೆಯಿಂದಾಗಿ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ನಡೆದು ಹೋಯಿತು. ಈ ಕುರಿತಂತೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡವರೆಲ್ಲಾ ಕಬ್ಬು ಬೆಳೆಗಾರರಲ್ಲ. ಕೇವಲ 8 ಮಂದಿ ಕಬ್ಬು ಬೆಳೆಗಾರರು ಮಾತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಸಾಲ ಬಾಧೆಯಿಂದಾಗಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡವರಲ್ಲ  ಕಬ್ಬು ಬೆಳೆಗಾರರಲ್ಲ. ಇದರಲ್ಲಿ 8 ಮಂದಿ ಮಾತ್ರ ಕಬ್ಬು ಬೆಳೆಗಾರರಾಗಿದ್ದು, ಉಳಿದವರೆಲ್ಲಾ ಬೇರೆ, ಬೇರೆ ಕಾರಣಗಳಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದರು.

ಇದೇ ವೇಳೆ ರಾಜ್ಯದ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಶರಣಾಗಬಾರದು. ಆತ್ಮಹತ್ಯೆ ಎಲ್ಲದಕ್ಕೂ ಪರಿಹಾರ ಅಲ್ಲ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿಕೊಂಡಿದ್ದಾರೆ.

ರೈತರು ಹೆಚ್ಚಾಗಿ ಖಾಸಗಿಯವರಿಂದ ಸಾಲ ಪಡೆಯುತ್ತಿದ್ದು, ಅವರು ನೀಡುತ್ತಿರುವ ಕಿರುಕುಳ ಬಗ್ಗೆ ಮಾಹಿತಿ ಇದೆ.  ಖಾಸಗಿಯವರು ಕಿರುಕುಳ ನೀಡದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿರುವುದಾಗಿ ತಿಳಿಸಿದರು.

Write A Comment