ಕರ್ನಾಟಕ

ಮಲ್ಲೇಶ್ವರಂ ಬಾಂಬ್ ಸ್ಫೋಟ: ಗಾಯಾಳು ಲಿಶಾಗೆ ಪರಿಹಾರ ನೀಡಲು ಹೈಕೋರ್ಟ್ ಆದೇಶ

Pinterest LinkedIn Tumblr

lishaಬೆಂಗಳೂರು: ಮಲ್ವೇಶ್ವರಂನ ಬಿಜೆಪಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಲಿಶಾಗೆ ಮೂರು ಲಕ್ಷ ರುಪಾಯಿ ಪರಿಹಾರ ನೀಡುವಂತೆ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಪರಿಹಾರ ಕೋರಿ ಗಾಯಾಳು ಲಿಶಾ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ಮೂರು ವಾರದೊಳಗೆ ಮಧ್ಯಂತರ ಪರಿಹಾರವಾಗಿ ಮೂರು ಲಕ್ಷ ರುಪಾಯಿ ನೀಡಿ ಎಂದು ಸರ್ಕಾರಕ್ಕೆ ಸೂಚಿಸಿದೆ.

1 ಕೋಟಿ ರೂ. ಪರಿಹಾರ, ವಿಕಲಚೇತನ ಕೋಟಾದಡಿ ಉದ್ಯೋಗ ನೀಡಬೇಕು. ಮುಂದಿನ ವೈದ್ಯಕೀಯ ವೆಚ್ಚ ಭರಿಸಬೇಕು ಮತ್ತು ಭಯೋತ್ಪಾದಕ ದಾಳಿಗೆ ತುತ್ತಾದವರಿಗೆ ಪರಿಹಾರ ನೀಡಲು ರಾಷ್ಟ್ರೀಯ ನೀತಿ ರೂಪಿಸಬೇಕು ಎಂದು ಅರ್ಜಿಯಲ್ಲಿ ಲಿಶಾ ಮನವಿ ಮಾಡಿದ್ದರು.

2013ರಲ್ಲಿ ಮಲ್ಲೇಶ್ವರಂ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ಲಿಶಾ ತೀವ್ರವಾಗಿ ಗಾಯಗೊಂಡಿದ್ದಳು.

Write A Comment