ಕರ್ನಾಟಕ

ಕಾಂಗ್ರೆಸ್‌ನಿಂದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಉಚ್ಛಾಟನೆ

Pinterest LinkedIn Tumblr

A.S. Patil Nadahalli

ಬೆಂಗಳೂರು: ಪ್ರತ್ಯೇಕ ರಾಜ್ಯದ ಬೇಡಿಕೆ ಹಾಗೂ ಉತ್ತರ ಕರ್ನಾಟಕವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ತಮ್ಮದೇ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರನ್ನು ಬುಧವಾರ ಪಕ್ಷದಿಂದಲೇ ಉಚ್ಛಾಟಿಸಲಾಗಿದೆ.

ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿದ್ದ ಶಾಸಕ ನಡಹಳ್ಳಿ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಅಲ್ಲದೆ ನಡಹಳ್ಳಿಯನ್ನು ಪಕ್ಷದಿಂದಲೇ ಉಚ್ಚಾಟಿಸುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಇಂದು ಎ.ಕೆ.ಆಂಟನಿ ನೇತೃತ್ವದ ಶಿಸ್ತು ಸಮಿತಿ, ನಡಹಳ್ಳಿ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಸೂಚಿಸಿದೆ.

Write A Comment