ಕರ್ನಾಟಕ

ಮಂಡ್ಯದಲ್ಲಿ ರಮ್ಯಾ ದಿಢೀರ್ ಪ್ರತ್ಯಕ್ಷ; ಮೃತ ರೈತರ ಕುಟುಂಬಕ್ಕೆ ಸಾಂತ್ವನ

Pinterest LinkedIn Tumblr

ramya-electionsಮಂಡ್ಯ: ಕಳೆದ ಲೋಕಸಭೆ ಚುನಾವಣೆಯ ಸೋಲಿನ ನಂತರ ನಾಪತ್ತೆಯಾಗಿದ್ದ ಮಾಜಿ ಸಂಸದೆ ಹಾಗೂ ಸ್ಯಾಂಡಲ್‌ವುಡ್ ನಟಿ ರಮ್ಯಾ ಅವರು ಮಂಗಳವಾರ ದಿಢೀರ್ ಮಂಡ್ಯದಲ್ಲಿ ಪ್ರತ್ಯಕ್ಷವಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಚುನಾವಣೆ ಸೋಲಿನ ನಂತರ ಮಂಡ್ಯದಿಂದಲೇ ದೂರ ಉಳಿದಿದ್ದ ರಮ್ಯಾ, ಇಂದು ಆತ್ಮಹತ್ಯೆ ಮಾಡಿಕೊಂಡ ಕೆಲವು ರೈತರ ಮನೆಗಳಿಗೆ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ.

ತಮ್ಮ ಈ ದಿಢೀರ್ ಭೇಟಿಯ ಬಗ್ಗೆ ಜಿಲ್ಲಾ ಕಾಂಗ್ರೆಸ್ ಮುಖಂಡರಿಗೂ ಮಾಹಿತಿ ನೀಡದ ರಮ್ಯಾ, ಜಿಲ್ಲೆಯ ಪಡಕನಹಳ್ಳಿ, ಗಾಣದಹೊಸೂರು, ಹೊನ್ನನಾಯಕನಹಳ್ಳಿಗೆ ಭೇಟಿ ನೀಡಿ ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಕಳೆದು ಮೂರು ತಿಂಗಳಿನಿಂದ ಜಿಲ್ಲೆಯಲ್ಲಿ ಸಾಲದ ಬಾಧೆಯಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಈ ಕಡೆ ಮುಖ ತೋರಿಸದ ರಮ್ಯಾ ವಿರುದ್ಧ ಶಿಸ್ತು ಕ್ರಮ ತೆಗೆಕೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಹೈಕಮಾಂಡ್‌ಗೆ ದೂರು ನೀಡಿದ್ದರು.

ಮಂಡ್ಯ ಜಿಲ್ಲೆಯಲ್ಲಿ ಇದುವರೆಗೆ 25ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದು, ಇತ್ತೀಚಿಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸೇರಿದಂತೆ ಹಲವು ಮುಖಂಡರು ಆತ್ಮಹತ್ಯೆ ಮಾಡಿಕೊಂಡ ರೈತರ ಮನಗೆ ತೆರಳಿ ಸಾಂತ್ವನ ಹೇಳಿದ್ದರು. ಅಲ್ಲದೆ ಪರಿಹಾರ ಸಹ ನೀಡಿದ್ದರು.

Write A Comment