ಕರ್ನಾಟಕ

ವೇಶ್ಯಾವಾಟಿಕೆ ಕೇಂದ್ರದ ಮೇಲೆ ರೈಡ್ : ಬೆಚ್ಚಿ ಬಿದ್ದ ಪೊಲೀಸರು !

Pinterest LinkedIn Tumblr

veಸಾಂಸ್ಕೃತಿಕ ನಗರಿ ಮೈಸೂರು ಇತ್ತೀಚೆಗೆ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದ್ದು ಇದಕ್ಕೆ ಇಂಬು ನೀಡುವಂತೆ ಇಲ್ಲಿನ ವಿಜಯನಗರದ ಖಾಸಗಿ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಕೇಂದ್ರಕ್ಕೆ ಪೊಲೀಸರು ದಾಳಿ ನಡೆಸಿ ಒಬ್ಬ ಬಾಲಕಿಯೂ ಸೇರಿದಂತೆ ಇಬ್ಬರನ್ನು ರಕ್ಷಿಸಿದ ಘಟನೆ ನಡೆದಿದೆ.

ಬೆಂಗಳೂರಿನ ಸ್ವಯಂ ಸೇವಾ  ಸಂಸ್ಥೆಯೊಂದು ನೀಡಿದ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಈ ದಾಳಿ ನಡೆಸಿದ್ದು ಈ ಸಮಯದಲ್ಲಿ ಮಾಂಸ ದಂಧೆಯ ರೂವಾರಿಗಳು ಎನ್ನಲಾದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಅಲ್ಲದೇ ಈ ಸಮಯದಲ್ಲಿ ಅಪ್ರಾಪ್ತ ಬಾಲಕಿಯನ್ನೂ ಸಹ ಈ ದಂಧೆಗೆ ಬಳಸಿಕೊಳ್ಳುತ್ತಿದ್ದರು ಎನ್ನಲಾಗಿದ್ದು ಪಾಪಿಗಳ ಈ ಕೃತ್ಯಕ್ಕೆ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಅಲ್ಲದೇ ಈ ಸಮಯದಲ್ಲಿ ಆರೋಪಿಗಳ ಸ್ವಿಫ್ಟ್ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment