ಕರ್ನಾಟಕ

‘ಲೋಕಾ’ ಭ್ರಷ್ಟಾಚಾರ ಪ್ರಕರಣ: ಅಶೋಕ್ ಬಂಧನ ಅವಧಿ ಮುಕ್ತಾಯ

Pinterest LinkedIn Tumblr

ashoಬೆಂಗಳೂರು; ಲೋಕಾಯುಕ್ತ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸೆಬಂಧಿಸಿದಂತೆ ಬಂಧಿಸಲಾಗಿದ್ದ ಆರೋಪಿ ಅಶೋಕ್ ಕುಮಾರ್‌ನ ಬಂಧನ ಅವಧಿ ಇಂದಿಗೆ ಮುಕ್ತಾಯಗೊಂಡಿದ್ದ ಹಿನ್ನೆಲೆಯಲ್ಲಿ ಇಂದು ವಿಚಾರಣೆ ನಡೆಸಿದ ಲೋಕಾಯುಕ್ತ ಕೋರ್ಟ್, ಆಗಸ್ಟ್ 14ರ ವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಿದೆ.

ಕಳೆದ ಜುಲೈ 20ರಂದು ಆರೋಪಿಯನ್ನು ಬಂಧಿಸಿದ್ದ ಅಧಿಕಾರಿಗಳು, ನ್ಯಾಯಾಲಯಕ್ಕೆ ಹಾಜರುಪಡಿಸಿ ಎರಡು ಬಾರಿ ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಕೋರ್ಟ್ ಎರಡನೇ ಬಾರಿಗೆ ಹೆಚ್ಚುವರಿಯಾಗಿ ಮೂರು ದಿನಗಳ ಕಾಲ ಎಸ್ಐಟಿ ವಶಕ್ಕೆ ಒಪ್ಪಿಸಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಅವಧಿ ಇಂದಿಗೆ ಮುಗಿದಿದ್ದರಿಂದ ಇಂದು ಮತ್ತೆ ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ, ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಿದೆ.

ಇನ್ನು ಅಶೋಕ್ ಕುಮಾರ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಈಗಾಗಲೇ ಎರಡು ಬಾರಿ ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಎಸ್ಐಟಿ ಅಧಿಕಾರಿಗಳು, ಆರೋಪಿ ಅಶೋಕ್ ಕುಮಾರ್‌ನಿಂದ ಹಲವು ಮಹತ್ವದ ವಿಚಾರಗಳನ್ನು ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Write A Comment