ಮಹಿಳೆಯೊಬ್ಬಳು ಸ್ನಾನ ಮಾಡುವಾಗ ವಿಡಿಯೋ ತೆಗೆದು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರವೆಗಿದ ಅಮಾನವೀಯ ಘಟನೆಯೊಂದು ಹಾವೇರಿಯಲ್ಲಿ ನಡೆದಿದೆ.
ಬ್ಯಾಡಗಿ ತಾಲೂಕಿನ ಹಿರೇಹಳ್ಳಿ ಗ್ರಾಮದ ಸಂತೋಷ್ ಎಂಬ ಕಾಮುಕ ನಗರದಲ್ಲಿನ ಮಹಿಳೆಯೊಬ್ಬಳು ಸ್ನಾನ ಮಾಡುವಾಗ ವಿಡಿಯೋ ತೆಗೆದು ಅಂತರ್ಜಾಲಕ್ಕೆ ಹರಿಬಿಡುವುದಾಗಿ ಆಕೆಯನ್ನು ಬ್ಲಾಕ್ ಮೇಲ್ ಮಾಡುತ್ತಿದ್ದ . ಅಷ್ಟೇ ಅಲ್ಲ, ಆಕೆಯನ್ನು ಇದೇ ರೀತಿ ಹೆದರಿಸಿ ಅತ್ಯಾಚಾರ ನಡೆಸಿ ಪರಾರಿಯಾಗಿದ್ದ ಎನ್ನಲಾಗಿದೆ.
ಈ ಕುರಿತು ಕಳೆದ ಒಂಬತ್ತು ದಿನಗಳ ಹಿಂದೆ ದೂರು ದಾಖಲಾಗಿತ್ತು. ಪ್ರಕರಣವನ್ನು ದಾಖಲಿಸಿಕೊಂಡ ಶಿಗ್ಗಾವಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
