ಕರ್ನಾಟಕ

ಮಹೇಂದ್ರ ಜೈಲೋ ಕಾರಿಗೆ ಹಾಲಿನ ಲಾರಿ ಡಿಕ್ಕಿ : 3 ಸಾವು

Pinterest LinkedIn Tumblr

accidentಮುಳಬಾಗಿಲು: ಇಲ್ಲಿನ ನರಸಿಂಹ ತೀರ್ಥ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೈಲೋ ಕಾರಿಗೆ ಹಾಲಿನ ಲಾರಿ ಡಿಕ್ಕಿ ಹೊಡೆದು ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.

ಆಂಧ್ರ ಕಡೆಯಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಕೆಎಸ್‌ಆರ್‌ಟಿಸಿ ಡಿಪೋ ಬಳಿ ಕಾರಿಗೆ ಹಾಲಿನ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಚಾಲಕ ಹರೀಶ್, ಶ್ರೀನಾಥ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೃತರನ್ನು ಬೆಂಗಳೂರಿನ ನಾಗರಬಾವಿಯ ನಿವಾಸಿಗಳಾದ ವೈಷ್ಣವಿ(28), ಮಂಗಳ ಜ್ಯೋತಿ(56), ಬೃಂದಾ (58) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಡಿವೈಎಸ್ಪಿ ಅಬ್ದುಲ್ ರೆಹಮಾನ್, ಸರ್ಕಲ್ ಇನ್ಸ್‌ಪೆಕ್ಟರ್ ಎನ್.ಎನ್.ರಾಮರೆಡ್ಡಿ, ಸಬ್‌ಇನ್ಸ್‌ಪೆಕ್ಟರ್ ಎಂ.ಶಂಕರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Write A Comment