ಬೆಂಗಳೂರು: ಬಿಬಿಎಂಪಿ ಚುನಾವಣೆಗೂ ಮುನ್ನವೇ ಬಿಜೆಪಿ ಗೆಲುವಿನ ನಗೆ ಬೀರಿದೆ. ಬಿಜೆಪಿ ಅಭ್ಯರ್ಥಿ ಭಾರತಿ, ಹೊಂಗಸಂದ್ರ ಕಾರ್ಪೊರೇಟರ್ ಆಗಿ ಅವಿರೋಧವಾಗಿ ಗುರುವಾರ ಆಯ್ಕೆ ಆಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕೆ.ಮಹೇಶ್ವರ ಅವರ ನಾಮಪತ್ರ ತಿರಸ್ಕೃತವಾಗಿದ್ದರೆ, ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಚುನಾವಣಾ ಕಣಕ್ಕೆ ಇಳಿಸಿರಲಿಲ್ಲ. ಪಕ್ಷೇತರರಾದ ಶಹೀನಾ, ಶ್ವೇತಾ ಬುಧವಾರ ನಾಮಪತ್ರ ವಾಪಸ್ ಪಡೆದಿದ್ದರು. ಹೀಗಾಗಿ ಭಾರತಿ ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಆಗಸ್ಟ್ 11 ರಂದು ನಾಮಪತ್ರ ಪರಿಶೀಲನೆ ನಡೆದಿದ್ದು, ಕಾಂಗ್ರೆಸ್ ನ ಅಭ್ಯರ್ಥಿಯಾಗಿದ್ದ ಕೆ. ಮಹೇಶ್ವರಿ ಎಂಬುವರು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿತ್ತು. ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನೇ ಕಣಕ್ಕೀಳಿಸಿರಲಿಲ್ಲ. ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಶಹೀನಾ ಹಾಗೂ ಶ್ವೇತ ಎಂಬುವರು ನಾಮಪತ್ರ ಹಿಂಪಡೆದಿದ್ದರಿಂದ ಬಿಜೆಪಿಯ ಭಾರತಿಯವರ ಎದುರು ಸ್ಪರ್ಧಿಸಲು ಯಾವುದೇ ಅಭ್ಯರ್ಥಿಗಳು ಇಲ್ಲದಿರುವುದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಬಿಎಂಪಿಯ 198 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು, ಅದರಲ್ಲಿ ಬಿಜೆಪಿಗೆ ಮೊದಲ ಜಯ ಸಿಕ್ಕಿದೆ.