ಗದಗ: ಟಾಟಾ ಏಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಗೋಜನೂರು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಒಂಬ್ಬತ್ತು ಮಂದಿ ಮೃತಪಟ್ಟಿದ್ದು, 10 ಮಂದಿಗೆ ಗಂಭೀರ ಗಾಯಗಳಾಗಿವೆ. ಮೃತರಲ್ಲಿ 8 ಮಂದಿ ರಣತೂರಿನ ನಿವಾಸಿಗಳಾಗಿದ್ದು, ಓರ್ವ ಲಕ್ಷ್ಮೇಶ್ವರ ನಿವಾಸಿ ಎಂದು ಗುರುತಿಸಲಾಗಿದೆ.
ಅವಘಡದಲ್ಲಿ ಏಸ್‌ನಲ್ಲಿದ್ದ ಇನ್ನೂ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದು , ಅವರನ್ನು ಆಸ್ಪತ್ರಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಕೂಲಿ ಕಾರ್ಮಿಕರೆಂದು ತಿಳಿದು ಬಂದಿದೆ. ಲಕ್ಷ್ಮೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.