ಕರ್ನಾಟಕ

ಸರ್ಕಾರದ ಅಗ್ನಿ ಪರೀಕ್ಷೆಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Pinterest LinkedIn Tumblr

Siddaramaiah

ಮೈಸೂರು.ಆ.20: ಬಿಬಿಎಂಪಿ ಚುನಾವಣೆ ಫಲಿತಾಂಶವು ಜನಾದೇಶವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ದಿವಗಂತ ದೇವರಾಜು ಅರಸುರವರ ಶತಮಾನೋತ್ಸವ ಕಾರ್ಯಕ್ರಮಕ್ಕೆ ಹುಣಸೂರಿಗೆ ತೆರಳುವ ಸಲುವಾಗಿ ಮೈಸೂರಿಗೆ ಆಗಮಿಸಿದ ಸಂಧರ್ಭದಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೋಂದಿಗೆ ಮಾತನಾಡುತ್ತಿದ್ದರು,

ಈ ಬಾರಿಯ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷವು ಸ್ಪಷ್ಟ ಬಹುಮತ ಪಡೆಯುದೆಂಬ ಧೃಡ ವಿಶ್ವಾಸ ತಮಗಿದೆ ಆದರೆ ಫಲಿತಾಂಶದಲ್ಲಿ ಯಾವುದೇ ರೀತಿಯ ವ್ಯತ್ಯಾಸವಾದರೂ ಅದು ಜನಾದೇಶವಾಗುವುದಿಲ್ಲ ಎಂದರು.

ಬಿಬಿಎಂಪಿ ಚುನಾವಣೆಯಲ್ಲಿ ಎಸ್‍ಡಿಪಿಐ ಹಾಗೂ ಇನ್ನಿತರ ಪಕ್ಷಗಳ ಅಭ್ಯರ್ಥಿಗಳು ಭಾಗವಹಿಸಿದರೂ ನಮ್ಮ ಪಕ್ಷಕ್ಕೆ ಯಾವುದೇ ಹಿನ್ನೆಡೆಯಾಗುವುದಿಲ್ಲ ನಮಗೆ ಹಿಂದೂಗಳು ಅಲ್ಪ ಸಂಖ್ಯಾತರು ಮುಸ್ಲಿಂರು,ಪೂರ್ಣಬೆಂಬಲ ಸೂಚಿಸಿದ್ದಾರೆ ಇದು ನಮ್ಮ ಗೆಲುವಿಗೆ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಬಾರಿಯ ಬಿಬಿಎಂಪಿ ಚುನಾವಣೆ ಫಲಿತಾಂಶ ಬಂದ ನಂತರ ತಾವು ಈ ಹಿಂದೆ ತಿಳಿಸಿದ್ದಂತೆ ಸಚಿವ ಸಂಪುಟವನ್ನು ವಿಸ್ತರಿಸಲಾಗುವುದು ಈ ಬಗ್ಗೆ ಯಾವುದೇ ಅಮುಮಾನ ಬೇಡ ವರಿಷ್ಟರೊಂದಿಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಬಿಜೆಪಿ ಪಕ್ಷದವರು ತಮ್ಮ ಆಡಳಿತದ ಅವಧಿಯಲ್ಲಿ ಉದ್ಯಾನ ನಗರಿ ಆಗಿದ್ದ ಬೆಂಗಳೂರನ್ನು ಕಸದ ನಗರವನ್ನಾಗಿ ಪರಿವರ್ತಿಸಿರುವುದೇ ಅವರು ಬೆಂಗಳೂರಿನ ಜನತೆಗೆ ನೀಡಿರುವ ಕೊಡುಗೆ ಆಗಿದೆ ಎಂದು ವ್ಯಂಗವಾಡಿದರು.

ಈ ತಿಂಗಳ 24 ರಂದು ಪ್ರಧಾನಿ ನರೇಂದ್ರಮೋದಿಯವರನ್ನು ಭೇಟಿ ಮಾಡಲು ಅವಕಾಶ ಸಿಕ್ಕಿದ್ದು ಅಂದು ರಾಜ್ಯದಲ್ಲಿ ತಲೆದೋರಿರುವ ಬರಗಾಲ ಪರಿಸ್ಥಿತಿ, ರೈತರ ಸಮಸ್ಯೆಗಳು ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಪರಿಹಾರ ಕೋರಿ ಮನವಿ ಸಲ್ಲಿಸಲಾಗುವುದು ಎಂದರು

ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಈ ಬಾರಿಯ ದಸಾರ ಮಹೋತ್ಸವವನ್ನು ಸರಳ ಹಾಗೂ ಸಾಂಪ್ರದಾಯಕವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ್ದು ಈ ಹಿನ್ನೆಲೆಯಲ್ಲಿ ಸಚಿವರು ಮತ್ತು ಸಮಿತಿಯ ಸದಸ್ಯರುಗಳು ವಿದೇಶ ಪ್ರವಾಸ ಕೈ ಗೊಳ್ಳದಂತೆ ಸೂಚನೆ ನೀಡಲಾಗಿದೆ ಎಂದರು.

ಅರಸುವರ ಜನ್ಮ ಶತಮಾನೋತ್ಸವದ ಅಂಗವಾಗಿ ಕಲ್ಲಹಳ್ಳಿ -ಬೆಟ್ಟದತುಂಗ ರಸ್ತೆಯನ್ನು ಅಭಿವೃದ್ದಿಗೊಳಿಸಲು ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂಧರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ,ಶ್ರೀನಿವಾಸ್ ಪ್ರಸಾದ್, ಸಮಾಜ ಕಲ್ಯಾಣ ಸಚಿವ ಹೆಚ್ ಆಂಜನೇಯ, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಮೇಯರ್ ಆರ್ ಲಿಂಗಪ್ಪ, ಮುಡಾ ಅಧ್ಯಕ್ಷ ಮೋಹನ್ ಕುಮಾರ್ ಸೇರಿದಂತೆ ಕಾಂಗ್ರೇಸ್ ಮುಖಂಡರು ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Write A Comment