ಕರ್ನಾಟಕ

ಮಹದಾಯಿ ವಿವಾದವನ್ನು ಸೌಹಾರ್ದದಿಂದ ಬಗೆಹರಿಸಿಕೊಳ್ಳಲು ಸರ್ವಪಕ್ಷಗಳ ಸಭೆಯಲ್ಲಿ ತೀರ್ಮಾನ

Pinterest LinkedIn Tumblr

mahadahi-5

ಬೆಂಗಳೂರು,ಆ.23: ಮಹದಾಯಿ ನದಿ ವಿವಾದವನ್ನು ಸೌಹಾರ್ದಯುತವಾಗಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಇಂದು ನಡೆದ ಸರ್ ಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳುವ ಕಡೆ ಹೆಚ್ಚಿನ ಒಲವು ವ್ಯಕ್ತವಾಗಿದೆ.

ಗೋವಾ ರಾಜ್ಯ ಬಳಸಿಕೊಳ್ಳದೆ ಸಮುದ್ರ ಪಾಲಾಗುತ್ತಿರುವ ಮಹದಾಯಿ ನೀರನ್ನು ರಾಜ್ಯ ಬಳಸಿಕೊಳ್ಳಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು. ಮಹದಾಯಿ ಹೋರಾಟ ಸಮಿತಿ ಪ್ರತಿನಿಧಿಗಳು ಮಾತನಾಡಿ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರವೇಶಿಸುವಂತೆ ಒತ್ತಡ ಹೇರಬೇಕು, ಬಿಜೆಪಿ ಮುಖಂಡರು ಕೂಡ ಪ್ರಧಾನಿಯವರ ಮನವೊಲಿಸಬೇಕು.

ಗೋವಾದಲ್ಲೂ ಸರ್ಕಾರವಿದ್ದು , ವಿವಾದ ಬಗೆಹರಿಸಲು ಎಲ್ಲ ರೀತಿಯ ಪ್ರಯತ್ನ ಮಾಡಬೇಕು. ಅಲ್ಲದೆ ಎಲ್ಲ ಪಕ್ಷಗಳ ನಾಯಕರು ಒಗ್ಗಟ್ಟಿನಿಂದ ಈ ವಿವಾದವನ್ನು ಬಗೆಹರಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಅಲ್ಲದೆ ಮಹದಾಯಿ ನದಿ ವಿವಾದ ಬಗೆಹರಿದು ಕಳಸಾ ಬಂಡೂರಿ ಯೋಜನೆ ಅನುಷ್ಠಾನಗೊಳ್ಳುವವರೆಗೂ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಮಾತನಾಡಿ, ಮಹದಾಯಿ ಯೋಜನೆ ವಿಚಾರದಲ್ಲಿ ರಾಜ್ಯ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ತಮ್ಮ ಪಕ್ಷ ಬದ್ಧವಿದೆ.

ಮಹಾದಾಯಿ ನ್ಯಾಯಾಧೀಕರಣದ ಮುಂದೆ ಕಾನೂನು ತಜ್ಞರು ಸಮರ್ಥ ವಾದ ಮಂಡಿಸುತ್ತಿದ್ದಾರೆ. ಕಾನೂನು ತಜ್ಞರ ಅಭಿಪ್ರಾಯ ಪಡೆದು ವಿವಾದ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಪ್ರಧಾನಿಯವರ ಮನವೊಲಿಸಲು ರಾಜ್ಯ ಸರ್ಕಾರದ ಜೊತೆಗೆ ತಮ್ಮ ಪಕ್ಷದ ಸಹಕಾರವೂ ಇದೆ ಎಂದು ಹೇಳಿದರು. ಮಠಾಧೀಶರು ಮಾತನಾಡಿ, ವಿವಾದ ಬಗೆಹರಿಸಲು ತಜ್ಞರ ಸಮಿತಿ ರಚಿಸಬೇಕು, ಎಲ್ಲ ಪಕ್ಷದ ನಾಯಕರು ಒಮ್ಮತದ ನಿರ್ಧಾರ ಕೈಗೊಂಡು ತ್ವರಿತವಾಗಿ ಸಮಸ್ಯೆ ಬಗೆಹರಿಸಬೇಕು. ಈಗಾಗಲೇ ಆರಂಭವಾಗಿರುವ ಹೋರಾಟ ನಿಲ್ಲುವಂತೆ ಬಗೆಹರಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

5ಪ್ರಮುಖ ವಿಚಾರಗಳ ಬಗ್ಗೆ ಪ್ರಧಾನಿ ಗಮನಸೆಳೆಯಲು ದೆಹಲಿಗೆ ಸರ್ವಪಕ್ಷ ನಿಯೋಗ : ಸಿಎಂ

ಬೆಂಗಳೂರು: ಮಹದಾಯಿ ನೀರಾವರಿ ಯೋಜನೆ ಸೇರಿ 5 ಪ್ರಮುಖ ವಿಚಾರಗಳ ಬಗ್ಗೆ ಪ್ರಧಾನಿ ಅವರ ಗಮನ ಸೆಳೆಯಲು ಸರ್ವಪಕ್ಷ ನಿಯೋಗವನ್ನು ಕರೆದೊಯ್ಯುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸರ್ವಪಕ್ಷಗಳ ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ರೇಷ್ಮೆ, ದಾಳಿಂಬೆ, ದ್ರಾಕ್ಷಿ ಬರಗಾಲದ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಅನುದಾನ ಕೋರಲಾಗುವುದು ಎಂದು ಹೇಳಿದರು. ಸಭೆಯಲ್ಲಿ ರೈತ ಪ್ರತಿನಿಧಿಗಳು, ಮಠಾಧೀಶರು ತಮ್ಮದೇ ಆದ ಸಲಹೆಗಳನ್ನು ನೀಡಿದ್ದಾರೆ. ಅವುಗಳನ್ನು ಪರಿಗಣಿಸಿ ಪ್ರಧಾನಿಯವರಿಗೆ ಮನವಿ ಸಲ್ಲಿಸುವುದಾಗಿ ಹೇಳಿದರು.

Write A Comment