ಪೆನುಕೊಂಡ: ಬೆಂಗಳೂರು ನಾಂದೇಡ್ ಎಕ್ಸ್ ಪ್ರೆಸ್ ರೈಲಿಗೆ ಗ್ರಾನೈಡ್ ಕಲ್ಲು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು 25ಕ್ಕೂ ಹೆಚ್ಚು ಮಂದಿ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ಆಂಧ್ರಪ್ರದೇಶದ ಪೆನುಕೊಂಡ ಸಮೀಪದ ಮಡಕಶಿರ ಬಳಿ ರೈಲ್ವೆ ಕ್ರಾಸಿಂಗ್ ನಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ರಾಯಚೂರು ಜಿಲ್ಲೆಯ ದೇವದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ವೆಂಕಟೇಶ್ ನಾಯಕ್ ಸೇರಿದಂತೆ ಆರು ಮಂದಿ ದುರ್ಮರಣ ಹೊಂದಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಲಾರಿಯಲ್ಲಿ ಇದ್ದ ಇಬ್ಬರು ಹಾಗೂ ರೈಲಿನಲ್ಲಿ ಇದ್ದ ನಾಲ್ಕು ಪ್ರಯಾಣಿಕರು ಸಾವನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಚ್ 1 ಎಸಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಬೋಗಿಯೊಳಗೆ ಮಲಗಿದ್ದ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.