ಕರ್ನಾಟಕ

ಕಳಸಾ-ಬಂಡೂರಿ ಹೋರಾಟ: ಒಂದು ತಿಂಗಳೊಳಗೆ ಮುಖ್ಯಮಂತ್ರಿಗಳ ಸಭೆ-ಎಂ.ಬಿ.ಪಾಟೀಲ್ ವಿಶ್ವಾಸ

Pinterest LinkedIn Tumblr

pateelಬೆಂಗಳೂರು, ಆ. 28: ಮಹದಾಯಿ ಜಲ ವಿವಾದ ಕುರಿ ತಂತೆ ಪ್ರಧಾನಿ ನರೇಂದ್ರ ಮೋದಿ ಒಂದು ತಿಂಗಳೊಳಗೆ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು, ಚರ್ಚೆಗೆ ವೇದಿಕೆ ಕಲ್ಪಿಸಿ ಪರಿಹಾರ ಕಂಡು ಹಿಡಿಯಲು ಪ್ರಯತ್ನಿಸಲಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಪ್ರತಿನಿಧಿಸುತ್ತಿರುವ ಕೇಂದ್ರದ ನಾಲ್ವರು ಸಚಿವರು ಮಹದಾಯಿ, ಕಳಸಾ-ಬಂಡೂರಿ ವಿವಾದ ಇತ್ಯರ್ಥಕ್ಕೆ ಪ್ರಧಾನಿ ಮನವೋಲಿಕೆ ಮಾಡಿ ಮಾತುಕತೆಗೆ ವೇದಿಕೆ ಸಜ್ಜುಗೊಳಿಸಲಿದ್ದಾರೆ ಎಂದು ನುಡಿದರು.
ಕೇಂದ್ರ ನಗರಾಭಿವೃದ್ಧಿ ಹಾಗೂ ಸಂಸದೀಯ ವ್ಯವ ಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ಈಗಾಗಲೇ ಈ ಕುರಿತು ಸ್ಪಷ್ಟಪಡಿಸಿದ್ದು, ವಿವಾದವನ್ನು ಬಗೆಹರಿಸಲು ಪ್ರಧಾನಿ ಮೋದಿಯವರು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದಾರೆಂದು ಹೇಳಿಕೆ ನೀಡಿದ್ದಾರೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಒಂದು ವೇಳೆ ಸಮಸ್ಯೆ ಬಗೆಹರಿಸಲು ವಿಳಂಬವಾ ದಲ್ಲಿ, ರಾಜ್ಯದ ಜನತೆ ಮತ್ತು ರೈತರ ಹಿತದೃಷ್ಟಿಯಿಂದ ನ್ಯಾ ಯಾಧಿಕರಣಕ್ಕೆ ಮೇಲ್ಮನವಿ ಸಲ್ಲಿಸಿ, ಮಧ್ಯಂತರ ಆದೇಶ ಪಡೆಯುವಂತೆ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕಾನೂನು ತಜ್ಞರ ತಂಡಕ್ಕೆ ಸೂಚನೆ ನೀಡಲಾಗುವುದು ಎಂದು ಎಂ.ಬಿ.ಪಾಟೀಲ್ ಮಾಹಿತಿ ನೀಡಿದರು.

ಕಳಸಾ-ಬಂಡೂರಿ ಯೋಜನೆ ಕೈಗೆತ್ತಿಕೊಳ್ಳುವ ರಾಜ್ಯದ ಪ್ರಸ್ತಾವನೆಗೆ ಗೋವಾ ಸರಕಾರ ಈ ಹಿಂದೆ ತಾತ್ವಿ ಕವಾಗಿ ತನ್ನ ಒಪ್ಪಿಗೆ ನೀಡಿತ್ತು. ನಂತರದ ದಿನಗಳಲ್ಲಿ ಉಂಟಾದ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಗೋವಾ ರಾ ಜ್ಯ ನ್ಯಾಯಾಧಿಕರಣ ರಚನೆಗೆ ಒತ್ತಾಯಿಸಿತು. ಅಲ್ಲದೆ, 2010ರಲ್ಲಿ ನೇಮಕಗೊಂಡ ನ್ಯಾಯಾಧಿಕರಣವು ಈವರೆ ಗೂ ವಿಚಾರಣೆ ನಡೆಸುತ್ತಲೇ ಇದೆ. ಸುಮಾರು ಐದು ವರ್ಷ ಕಳೆದರೂ, ವಿಚಾರಣೆ ಇನ್ನು ಪೂರ್ಣಗೊಂಡಿಲ್ಲ.

ನ್ಯಾಯಾಧೀಕರಣ ತ್ವರಿತ ವಿಚಾರಣೆ ನಡೆಸಬೇಕೆಂಬು ದು ರಾಜ್ಯದ ಆ ಭಾಗದ ರೈತರು ಹಾಗೂ ಜನಸಾಮಾನ್ಯ ರ ಆಶಯ. ಇದಕ್ಕೆ ರಾಜ್ಯ ಸರಕಾರದ ಸಹಮತಿಯೂ ಇದೆ ಎಂದ ಅವರು, ಉತ್ತರ ಕರ್ನಾಟಕ ಭಾಗದಲ್ಲಿನಾಲ್ಕೈದು ದಿನಗಳಿಂದ ರೈತರ ಪ್ರತಿಭಟನೆ ತೀವ್ರಗೊಂಡಿ ರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ತನ್ನ ಎಲ್ಲ ಪ್ರಾಮಾಣಿಕ ಪ್ರಯತ್ನವನ್ನು ಮುಂದುವರೆಸಿದೆ ಎಂದರು.
ಬರ ಸ್ಥಿತಿ ಹಾಗೂ ಕುಡಿಯುವ ನೀರಿನ ಗಂಭೀರ ಸಮಸ್ಯೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಕೂಡಲೇ ಮಧ್ಯಪ್ರವೇಶಿಸಿ ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪಾಟೀಲ್ ಆಗ್ರಹಿಸಿದರು.
ಹಿಂಸೆ ಬೇಡ: ಮಹದಾಯಿ, ಕಳಸಾ-ಬಂಡೂರಿ ಜಲ ವಿವಾದ ಸಂಬಂಧ ರೈತರ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಳ್ಳದೆ ಶಾಂತ ರೀತಿಯಲ್ಲಿ ನಡೆಸಬೇಕು ಎಂದ ಅವರು, ಪ್ರಧಾನಿ ಮಧ್ಯ ಪ್ರವೇಶಿಸುವ ವಿಶ್ವಾಸವಿದ್ದು ರೈತರು ತಮ್ಮ ಪ್ರತಿಭಟನೆ ತಾತ್ಕಾಲಿಕವಾಗಿ ಕೈಬಿಡಬೇಕು ಎಂದು ಎಂ.ಬಿ.ಪಾಟೀಲ್ ಮನವಿ ಮಾಡಿದರು.

ಒಂದು ವೇಳೆ ಸಮಸ್ಯೆ ಬಗೆಹರಿಸಲು ವಿಳಂಬವಾದಲ್ಲಿ, ರಾಜ್ಯದ ಜನತೆ ಮತ್ತು ರೈತರ ಹಿತದೃಷ್ಟಿಯಿಂದ ನ್ಯಾಯಾಧಿಕರಣಕ್ಕೆ ಮೇಲ್ಮನವಿ ಸಲ್ಲಿಸಿ, ಮಧ್ಯಂತರ ಆದೇಶ ಪಡೆಯುವಂತೆ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕಾನೂನು ತಜ್ಞರ ತಂಡಕ್ಕೆ ಸೂಚನೆ ನೀಡಲಾಗುವುದು.
-ಎಂ.ಬಿ.ಪಾಟೀಲ್, ಜಲ ಸಂಪನ್ಮೂಲ ಸಚಿವ

Write A Comment