ಕರ್ನಾಟಕ

ಶಿಕ್ಷಣ ನೀತಿ ಬದಲಾವಣೆಗೆ ಸೆಪ್ಟಂಬರ್ ಅಂತ್ಯಕ್ಕೆ ರಾಜ್ಯದ ಸಲಹೆ ಕೇಂದ್ರಕ್ಕೆ ರವಾನೆ: ಕಿಮ್ಮನೆ ರತ್ನಾಕರ್

Pinterest LinkedIn Tumblr

Karnataka Minister for Primary and Secondary Education, Kimmaneಬೆಂಗಳೂರು, ಆ.31: ಕೇಂದ್ರ ಸರಕಾರವು ಪ್ರಸ್ತುತ ಶಿಕ್ಷಣ ನೀತಿಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದ್ದು, ಈ ಸಂಬಂಧ ರಾಜ್ಯ ಸರಕಾರದ ಸಲಹೆಗಳನ್ನು ಸೆಪ್ಟಂಬರ್ ಅಂತ್ಯಕ್ಕೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಲಿಖಿತ ರೂಪದಲ್ಲಿ ಕಳುಹಿಸಿಕೊಡಲಾಗುವುದು ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

ಸೋಮವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಹೊಸದಿಲ್ಲಿಯಲ್ಲಿ ನಡೆದ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಶಿಕ್ಷಣ ನೀತಿ ಬದಲಾವಣೆ ಕುರಿತು ಚರ್ಚೆ ನಡೆಸಲಾಗಿದ್ದು, ಎಲ್ಲ ರಾಜ್ಯಗಳಿಂದ ಲಿಖಿತ ಅಭಿಪ್ರಾಯ, ಸಲಹೆಗಳನ್ನು ಕೇಂದ್ರ ಸರಕಾರ ಕೋರಿದೆ ಎಂದರು.

1 ರಿಂದ 10ನೆ ತರಗತಿಯವರಿಗೆ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡಬಾರದು. 7ನೆ ತರಗತಿಯಲ್ಲಿ ಅವರ ಕಲಿಕಾಮಟ್ಟವನ್ನು ತಿಳಿಯಲು ಪರಿಶೀಲನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಅಲ್ಲದೆ, 3 ರಿಂದ 18ನೆ ವಯಸ್ಸಿನವರೆಗಿನ ಎಲ್ಲರಿಗೂ ಉಚಿತ ಹಾಗೂ ಸಮಾನ ಶಿಕ್ಷಣ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ ಎಂದು ಅವರು ಹೇಳಿದರು.

ಸಂಪುಟ ಪುನರ್‌ರಚನೆ
ಬಿಬಿಎಂಪಿ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸ್ತುತ ನನಗೆ ವಹಿಸಿರುವ ಜವಾಬ್ದಾರಿಯನ್ನು ಅತ್ಯಂತ ದಕ್ಷತೆಯಿಂದ ನಿರ್ವಹಿಸುವುದಷ್ಟೇ ನನ್ನ ಮುಂದಿರುವ ಕೆಲಸ. ಸಚಿವ ಸಂಪುಟದಲ್ಲಿ ಉಳಿಸಿಕೊಳ್ಳುವುದು ಅಥವಾ ಕೈ ಬಿಡುವುದು ಮುಖ್ಯಮಂತ್ರಿಯ ವಿವೇಚನೆಗೆ ಬಿಟ್ಟ ವಿಚಾರ. ಈ ಕ್ಷಣದವರೆಗೆ ಮುಖ್ಯಮಂತ್ರಿ ಈ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಜೊತೆ ಚರ್ಚೆ ನಡೆಸಿಲ್ಲ.
 ಕಿಮ್ಮನೆ ರತ್ನಾಕರ, ಶಿಕ್ಷಣ ಸಚಿವ

Write A Comment