ಕರ್ನಾಟಕ

ಬಿಜೆಪಿ ಜತೆ ಮೈತ್ರಿ ಮುಗಿದ ಅಧ್ಯಾಯ: ದೇವೇಗೌಡ

Pinterest LinkedIn Tumblr

Devegowdaಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಚುನಾವಣೆ ವಿಚಾರದಲ್ಲಿ ಬಿಜೆಪಿ ಜತೆ ಮೈತ್ರಿ ವಿಚಾರ ಮುಗಿದ ಅಧ್ಯಾಯ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಹೇಳಿದ್ದಾರೆ.

ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಅವರು, ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರನ್ನು ಬಿಟ್ಟರೆ ಮತ್ಯಾವ ಬಿಜೆಪಿ ನಾಯಕರು ನಮ್ಮ ಜತೆ ಚರ್ಚೆ ನಡೆಸಿಲ್ಲ. ಹೀಗಾಗಿ  ಬಿಜೆಪಿ ನಾಯಕರ ಚರ್ಚೆಗೆ ಸಮಯ ಮುಗಿದುಹೋಗಿದೆ ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷದಿಂದ 21 ಸದಸ್ಯರ ಸಂಖ್ಯೆಯ ಆಧಾರದಲ್ಲಿ ಜೆಡಿಎಸ್ ಗೆ 3 ರಿಂದ 4 ಸ್ಥಾನ ಹೀಗಾಗಿ ಉಪಮೇಯರ್ ಸ್ಥಾನವೇ ಬೇಕೆಂದು ನಾವು ಬೇಡಿಕೆ ಇಡುವುದಿಲ್ಲ. ಕಾಂಗ್ರೆಸ್ಗೆ ಬೆಂಬಲ ನೀಡಿದರೂ ನಾನು ಷರತ್ತು ಹಾಕಲ್ಲ. ಮೈತ್ರಿ ಕುರಿತು ನನ್ನ ಜತೆ ಮಾತನಾಡುವ ಅವಶ್ಯಕತೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ರಾಜ್ಯಾಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದರೆ ಸಾಕು ಎಂದು ಹೇಳಿದ್ದಾರೆ.

ಆಪರೇಷನ್ ಕಮಲ ಮೂಲಕ ಜೆಡಿಎಸ್ ನ 6 ಸದಸ್ಯರನ್ನು ಬಿಜೆಪಿಗೆ ಸೆಳೆಯುವ ಯತ್ನ ನಡೆಸಿದ್ದಾರೆ ಎಂಬ ಮಾಹಿತಿಯನ್ನು ಜೆಡಿಎಸ್ ಶಾಸಕರೊಬ್ಬರು ನನಗೆ ತಿಳಿಸಿದ್ದರು. ಹೀಗಾಗಿ ಜೆಡಿಎಸ್ ಕಾರ್ಪೋರೇಟರ್ಸ್ ಬೆಂಗಳೂರಿನಲ್ಲಿ ಇರುವುದು ಬೇಡ. ಬೆಂಗಳೂರು ಹೊರವಲಯದ ರೆಸಾರ್ಟ್ ಗೆ ತೆರಳಿ ಎಂದು ಹೇಳಿದ್ದೆ. ಆದರೆ ಅವರು ಕೇರಳಕ್ಕೆ ಹೋಗಿದ್ದರು ಎಂಬ ವಿಚಾರ ನನಗೆ ತಿಳಿದಿಲ್ಲ ಎಂದು ದೇವೇಗೌಡ ಅವರು ಹೇಳಿದ್ದಾರೆ.

Write A Comment