ಕರ್ನಾಟಕ

ಗೌರಿ–ಗಣೇಶ ಹಬ್ಬಕ್ಕೆ ವಿಶೇಷ ಬಸ್ ಸೇವೆ

Pinterest LinkedIn Tumblr

KSRTC-bus040514ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸೆಪ್ಟೆಂಬರ್‌ 15 ಮತ್ತು 16ರಂದು ರಾಜ್ಯದ ಬೇರೆ ಬೇರೆ ಊರುಗಳಿಗೆ ಬೆಂಗಳೂರಿನಿಂದ ಒಂದು ಸಾವಿರಕ್ಕೂ ಹೆಚ್ಚು ವಿಶೇಷ ಬಸ್ಸುಗಳ ವ್ಯವಸ್ಥೆ ಕಲ್ಪಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ ವಿಶೇಷ ಬಸ್ಸುಗಳು ಹೊರಡಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಬಸ್ಸುಗಳು ಹೊರಡಲಿವೆ.

ಶಾಂತಿನಗರ ಬಸ್ ನಿಲ್ದಾಣ: ಮಧುರೆ, ಕುಂಭಕೋಣಂ, ತಿರುಚ್ಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್. ಬೆಂಗಳೂರಿನ ವಿಜಯನಗರ, ಜೆ.ಪಿ.ನಗರ, ಜಯನಗರ 4ನೇ ಬ್ಲಾಕ್ ಮತ್ತು 9ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಕೆಂಗೇರಿ ಉಪನಗರದಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ, ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಇರಲಿದೆ.

ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರಕ್ಕೆ ತೆರಳುವ, ಮುಂಗಡ ಸೀಟು ಕಾಯ್ದಿರಿಸಿದ ವಿಶೇಷ ಬಸ್ಸುಗಳು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಪ್ರಯಾಣ ಆರಂಭಿಸಲಿವೆ. ಈ ಊರುಗಳಿಗೆ ತೆರಳುವ, ಸೀಟು ಮುಂಗಡ ಕಾಯ್ದಿರಿಸದ ವಿಶೇಷ ಬಸ್ಸುಗಳು ಕೆಂಪೇಗೌಡ ಬಸ್ ನಿಲ್ದಾಣದಿಂದಲೇ ಪ್ರಯಾಣ ಆರಂಭಿಸಲಿವೆ.

ಕಲಬುರ್ಗಿ, ಬಳ್ಳಾರಿ, ರಾಯಚೂರು, ಹೊಸಪೇಟೆ, ಕೊಪ್ಪಳ, ಯಾದಗಿರಿ, ಬೀದರ್ ಕಡೆ ಹೋಗುವ, ಸೀಟುಗಳನ್ನು ಮುಂಗಡ ಕಾಯ್ದಿರಿಸಿದ ವಿಶೇಷ ಬಸ್ಸುಗಳು ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣದಿಂದ, ಸೀಟುಗಳನ್ನು ಮುಂಗಡ ಕಾಯ್ದಿರಿಸದ ವಿಶೇಷ ಬಸ್ಸುಗಳು ಕೆಂಪೇಗೌಡ ಬಸ್ ನಿಲ್ದಾಣದಿಂದ ಪ್ರಯಾಣ ಆರಂಭಿಸಲಿವೆ. ಹೆಚ್ಚುವರಿ ಬಸ್ಸುಗಳಲ್ಲಿ ಸೀಟು ಕಾಯ್ದಿರಿಸುವ ಸೌಲಭ್ಯ ಇದೆ.

www.ksrtc.in ವೆಬ್‌ಸೈಟ್‌ ಮೂಲಕ ಟಿಕೆಟ್‌ ಕಾಯ್ದಿರಿಸಬಹುದು ಎಂದು ನಿಗಮದ ಪ್ರಕಟಣೆ ತಿಳಿಸಿದೆ.

Write A Comment