ಕರ್ನಾಟಕ

ಸಚಿವ ಸಂಪುಟ ವಿಸ್ತರಣೆ: ಹೈಕಮಾಂಡ್ ಜೊತೆ ಸಿಎಂ ಚರ್ಚೆ

Pinterest LinkedIn Tumblr

sidduಬೆಂಗಳೂರು, ಸೆ.13: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.23ರಂದು ಹೊಸದಿಲ್ಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

ಗ್ರಾಮ ಪಂಚಾಯತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಮಾಡುವ ಸಿದ್ಧತೆ ನಡೆದಿತ್ತು. ಆದರೆ, ಬಿಬಿಎಂಪಿಗೆ ಚುನಾವಣೆ ಘೋಷಣೆಯಾದ ನಂತರ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಂದೂಡಲ್ಪಟ್ಟಿತ್ತು.

ಬಿಬಿಎಂಪಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಪಕ್ಷೇತರರನ್ನು ಒಳಗೊಂಡ ಮೈತ್ರಿಕೂಟ ಅಧಿಕಾರಕ್ಕೆ ಬಂದಿರುವುದರಿಂದ ಹುಮ್ಮಸ್ಸಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್‌ರ ಜೊತೆ ಸಂಪುಟ ವಿಸ್ತರಣೆಯ ಕುರಿತು ಚರ್ಚೆ ಮಾಡಲು ಉದ್ದೇಶಿಸಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ದಿಗ್ವಿಜಯ್‌ಸಿಂಗ್ ಸೆ.21ರಂದು ದಿಲ್ಲಿಗೆ ಆಗಮಿಸಲಿದ್ದು, ಸೆ.23ರಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಜೊತೆ ವರಿಷ್ಠರ ಭೇಟಿಗೆ ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ಸಂಪುಟದಲ್ಲಿ ನಿಷ್ಕ್ರಿಯರಾಗಿರುವ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಆದ್ಯತೆ ನೀಡಬೇಕೆಂದು ಪದೇ ಪದೇ ಶಾಸಕರು ಒತ್ತಡ ಹೇರುತ್ತಿರುವುದರಿಂದ ಮುಖ್ಯಮಂತ್ರಿ ಸಂಪುಟ ವಿಸ್ತರಣೆಯೇ ಅಥವಾ ಪುನಾರಚನೆ ಮಾಡಬೇಕೇ ಎಂಬ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಸ್ಪೀಕರ್ ಕಾಗೋಡು ತಿಮ್ಮಪ್ಪ ಸಂಪುಟ ಪ್ರವೇಶ ಮಾಡುವ ಸಾಧ್ಯತೆಯಿದೆ. ಪರಮೇಶ್ವರ್ ಉಪಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿರುವುದರಿಂದ ಈ ಬಗ್ಗೆ ವರಿಷ್ಠರೇ ಅಂತಿಮ ತೀರ್ಮಾನ ಕೈಗೊಳ್ಳಲಿ ಎಂದು ದಿಗ್ವಿಜಯ್‌ಸಿಂಗ್‌ಗೆ ಸಿದ್ದರಾಮಯ್ಯರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವರಾದ ಶ್ಯಾಮನೂರು ಶಿವಶಂಕರಪ್ಪ, ವಿ.ಶ್ರೀನಿವಾಸ್‌ಪ್ರಸಾದ್, ಪರಮೇಶ್ವರ್ ನಾಯಕ್, ಕೃಷ್ಣಬೈರೇಗೌಡ, ಕಿಮ್ಮನೆರತ್ನಾಕರ, ಶಿವರಾಜ್ ತಂಗಡಗಿ ಯನ್ನು ಸಂಪುಟದಿಂದ ಕೈ ಬಿಟ್ಟು ಎಸ್.ಎಸ್.ಮಲ್ಲಿಕಾರ್ಜುನ್, ಕೆ.ಬಿ.ಕೋಳಿವಾಡ, ಬಸವರಾಜ ರಾಯರೆಡ್ಡಿ, ಎ.ಬಿ.ಮಾಲಕರೆಡ್ಡಿ, ಮಾಲೀಕಯ್ಯ ಗುತ್ತೇದಾರ್ ಅವರಿಗೆ ಸಂಪುಟದಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

Write A Comment