ಕರ್ನಾಟಕ

ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ವಿರೋಧಿಸಿ ಕರವೇ ಪ್ರತಿಭಟನೆ

Pinterest LinkedIn Tumblr

karave

ಬೆಂಗಳೂರು,ಸೆ.14: ಕೇಂದ್ರ ಸರ್ಕಾರ ಒತ್ತಾಯ ಪೂರ್ವಕವಾಗಿ ಹಿಂದಿ ಹೇರಿಕೆ ಮಾಡುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು.

ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ನೇತೃತ್ವದಲ್ಲಿ ಆನಂದ್‍ರಾವ್ ವೃತ್ತದ ಮಹಾತ್ಮ ಗಾಂಧಿ ಪ್ರಿಮೆ ಮುಂಭಾಗ ಸೇರಿದ ನೂರಾರು ಕಾರ್ಯಕರ್ತರು ಹಿಂದಿ ಹೇರಿಕೆಯನ್ನು ನಿಲ್ಲಿಸಿ ಕನ್ನಡಕ್ಕೆ ಕೇಂದ್ರದ ಆಡಳಿತ ಭಾಷೆಯ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ನಾರಾಯಣಗೌಡ ಕೇಂದ್ರ ಸರ್ಕಾರವು ಹಿಂದಿ ಸಪ್ತಾಹ ಇನ್ನಿತರ ಕಾರ್ಯಕ್ರಮಗಳ ಮೂಲಕ ಹಿಂದಿಯನ್ನು ಕನ್ನಡಿಗರ ಮೇಲೆ ಹೇರುವ ಪ್ರಯತ್ನ ಮಾಡುತ್ತಿದ್ದು ಇದರ ವಿರುದ್ಧ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.

ಕೇಂದರ ಸರ್ಕಾರವು ಹಿಂದಿಯನ್ನು ವೈಭವೀಕರಿಸಿ ಹಲವು ಪರೀಕ್ಷೆಗಳನ್ನು ಹಿಂದಿಯಲ್ಲಿ ನಡೆಸುತ್ತಿದೆ ಇದರಿಂದ ಭಾಷೆ ಗೊತ್ತಿಲ್ಲದ ಎಷ್ಟೋ ಮಂದಿ ಕನ್ನಡಿಗರಿಗೆ ಆನ್ಯಾಯವಾಗುತ್ತಿದೆ ಎಂದು ದೂರಿದರು.

ಹಿಂದಿ ಸಪ್ತಾಹ ಇನ್ನಿತರ ಹಿಂದಿ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ನಿಲ್ಲಿಸಿ ಪುರಾತನ ಇತಿಹಾಸ ಹೊದಿರುವ ಕನ್ನಡ ಬಾಷೆಯ ಬೆಳವಣಿಗೆಗೆ ಪ್ರಯತ್ನ ನಡೆಸುವಂತೆ ರಾಜ್ಯದ ಸಾಂಸದರು ಜನಪ್ರತಿನಿಧಿಗಳನ್ನು ಆಗ್ರಹಿಸಿದರು.

Write A Comment