ಕರ್ನಾಟಕ

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ನುಡಿ

Pinterest LinkedIn Tumblr

Siddaramai

ಬೆಂಗಳೂರು, ಸೆ.15: ಮಳೆ ಕೊರತೆಯಿಂದಾಗಿ ಕಾವೇರಿ ಪಾತ್ರದಲ್ಲಿ ನೀರಿನ ಕೊರತೆ ಉಂಟಾಗಿದ್ದು, ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ತಮಿಳುನಾಡು ಸರ್ಕಾರ ಸಹ ನ್ಯಾಯಾಧಿಕರಣ ಸೂತ್ರದಂತೆ ಸಂಕಷ್ಟ ಪರಿಸ್ಥಿತಿಯಲ್ಲಿ ಸಹ ಭಾಗಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜನತಾ ದರ್ಶನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲೇ ನೀರಿಲ್ಲ , ತಮಿಳುನಾಡಿಗೆ ನೀರು ಬಿಡುವುದು ಎಲ್ಲಿಂದ ಎಂದು ಪ್ರಶ್ನಿಸಿದರು. ಕಳೆದ ವರ್ಷ ಸಾಕಷ್ಟು ನೀರು ಬಿಡಲಾಗಿದೆ. ಈ ಬಾರಿ ಮಳೆ ಕೊರತೆಯಿಂದ ನೀರು ಬಿಡಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಕಾವೇರಿ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಾದರೆ ಪರಿಸ್ಥಿತಿ ತಿಳಿಯಾಗುತ್ತದೆ ಎಂದರು.

ರಾಘವೇಶ್ವರ ಶ್ರೀ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿದ್ದು, ಶೀಘ್ರವೇ ದೋಷಾರೋಪಣ ಪಟ್ಟಿ ಸಲ್ಲಿಸಲಾಗುತ್ತದೆ. ಸಿಐಡಿ ತನಿಖೆಯಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಹೇಳಿದರು. ಸಾಕ್ಷಿಗಳ ಹೇಳಿಕೆ ದಾಖಲಿಸಬೇಕು, ಪುರಾವೆ ಸಂಗ್ರಹಿಸಬೇಕು. ಅನಂತರ ಚಾರ್ಜ್‌ಶೀಟ್ ಸಲ್ಲಿಸಲಾಗುತ್ತದೆ. ರಾಜ್ಯ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿದಿಲ್ಲ. ತನಿಖೆ ನಿಷ್ಪಕ್ಷಪಾತವಾಗಿ ನಡೆದಿದೆ ಎಂದು ಸ್ಪಷ್ಟಪಡಿಸಿದರು.

Write A Comment