ಕರ್ನಾಟಕ

ತಿಂಗಳಾಂತ್ಯಕ್ಕೆ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Pinterest LinkedIn Tumblr

sidduಬೆಂಗಳೂರು, ಸೆ.18: ರಾಜ್ಯ ಸಚಿವ ಸಂಪುಟ ಪುನಾರಚನೆ ಸಂಬಂಧ ಮುಂದಿನ ವಾರ ಹೊಸದಿಲ್ಲಿಗೆ ತೆರಳಲಿದ್ದು, ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ತಿಂಗಳಾಂತ್ಯಕ್ಕೆ ಸಂಪುಟ ಪುನಾರಚನೆ ಉದ್ದೇಶ ಹೊಂದಿದ್ದು, ಈ ಬಗ್ಗೆಯೂ ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ರಾಜ್ಯದಲ್ಲಿನ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Write A Comment