ಕರ್ನಾಟಕ

ಮುಧೋಳದಲ್ಲಿ ಭೀಕರ ಅಪಘಾತ: 13 ಮಂದಿ ದುರ್ಮರಣ

Pinterest LinkedIn Tumblr

Accidentಬಾಗಲಕೋಟೆ: ಇಲ್ಲಿನ ಮುಧೋಳ ತಾಲೂಕಿನ ಲೋಕಾಪುರ ಗ್ರಾಮದ ಬಳಿ ಶುಕ್ರವಾರದಂದು ಟಾಟಾ ಏಸ್‌ ವಾಹನ ಮತ್ತು ಟ್ಯಾಂಕರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ ಮತ್ತು ತೀವ್ರವಾಗಿ ಗಾಯಗೊಂಡಿದ್ದವರ ಪೈಕಿ 5 ಜನ ಆಸ್ಪತ್ರೆಯಲ್ಲಿ ಮೃತಪಡುವುದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಒಟ್ಟು ಸಂಖ್ಯೆ 13ಕ್ಕೆ ಏರಿದೆ. ಮೃತರೆಲ್ಲರೂ ಟಾಟಾ ಏಸ್‌ನಲ್ಲಿ ಪ್ರಯಾಣಿಸುತ್ತಿದ್ದ ನತದೃಷ್ಟರಾಗಿದ್ದಾರೆ.

ಭೀಕರ ಅಪಘಾತದ ಸುದ್ದಿ ತಿಳಿದು ಇಲ್ಲಿನ ಲೋಕಾಪುರ ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ಭೇಟಿ ನೀಡಿದ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌,ಪಾಟೀಲ್‌ ಅವರು ಮೃತರ ಸಂಬಂಧಿಕರಿಗೆ ಸಾಂತ್ವನ ಹೇಳಿದರು ಮತ್ತು ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಪಾಟೀಲ್‌ ಅವರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 1 ಲಕ್ಷ ರೂಪಾಯಿಗಳ ಹಾಗೂ ಗಾಯಗೊಂಡವರಿಗೆ 25 ಸಾವಿರ ರೂಪಾಯಿಗಳ ಪರಿಹಾರ ಘೋಷಿಸಿದರು.

ಅಪಘಾತ ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಆಸ್ಪತ್ರೆಯಲ್ಲಿ ಮೃತ ಬಂಧುಗಳ ರೋದನ ಮುಗಿಲುಮುಟ್ಟಿತ್ತು.
-ಉದಯವಾಣಿ

Write A Comment