ಕರ್ನಾಟಕ

ಎರಡು ಮಕ್ಕಳನ್ನು ಹಳ್ಳಕ್ಕೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡ ತಾಯಿ

Pinterest LinkedIn Tumblr

suicide1

ಕೋಲಾರ, ಸೆ.27: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದ ಗೃಹಿಣಿ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲ್ಲೂಕಿನ ಬೆಳಗಾನಹಳ್ಳಿಯಲ್ಲಿ ನಡೆದಿದೆ.

ಮಕ್ಕಳಾದ ಸೌಮ್ಯ (3), ವರ್ಷಾ (1) ಹಾಗೂ ತಾಯಿ ಶ್ಯಾಮಲಾ (25) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳು.

ನಿನ್ನೆ ಸಂಜೆ ಶ್ಯಾಮಲಾ ತನ್ನ ಗಂಡ ಸೋಮೇಶ್‌ನೊಂದಿಗೆ ಜಗಳ ಮಾಡಿಕೊಂಡ ಹಿನ್ನೆಲೆಯಲ್ಲಿ ತೀವ್ರ ಮನನೊಂದ ಶ್ಯಾಮಲಾ ತನ್ನಿಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೂಲಿ ಕೆಲಸ ಮಾ‌ಡಿಕೊಂಡು ಜೀವನ ಸಾಗಿಸುತ್ತಿದ್ದ ದಂಪತಿ ಕೆಲ ತಿಂಗಳುಗಳಿಂದಲೂ ಸಣ್ಣ- ಸಣ್ಣ ವಿಚಾರಕ್ಕೆ ಜಗಳವಾಡುತ್ತಿದ್ದರು. ನಿನ್ನೆ ನಡೆದ ಜಗಳದಿಂದ ಶ್ಯಾಮಲಾ ತೀವ್ರವಾಗಿ ಬೇಸರಗೊಂಡು ಆತ್ಮಹತ್ಯೆ ಮಾ‌ಡಿಕೊಂಡಿದ್ದಾಳೆ. ಪ್ರಕರಣ ದಾಖಲಿಸಿ ಕೊಂಡಿರುವ ಕೋಲಾರ ಗ್ರಾಮಾಂತರ ಠಾಣೆಯ ಪೊಲೀಸರು ಮುಂದಿನ ಕ್ರಮ ಕೈಗೊಂಡಿ‌ದ್ದಾರೆ.

Write A Comment