ಕರ್ನಾಟಕ

ರಾಘವೇಶ್ವರ ಶ್ರೀಗಳಿಗೆ ಸೆ.30ರಂದು ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ಸಿಐಡಿ ನೋಟಿಸ್

Pinterest LinkedIn Tumblr

13BG_RAGHAVESHWARA_2241969f

ಬೆಂಗಳೂರು: ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ಸೆ. 30ರಂದು ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ಸಿಐಡಿ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.

ಬುಧವಾರ ಬೆಳಗ್ಗೆ 9 ಗಂಟೆಗೆ ದೈಹಿಕ ಪರೀಕ್ಷೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದು, ಖಾಲಿ ಹೊಟ್ಟೆಯಲ್ಲಿ ಆಗಮಿಸುವಂತೆ ಸೂಚನೆ ನೀಡಿದ್ದಾರೆ. ಬುಧವಾರ ಶ್ರೀಗಳಿಗೆ ಒಟ್ಟು ಮೂರು ವಿಧದ ಪರೀಕ್ಷೆಗಳು ನಡೆಯಲಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದಕ್ಕಾಗಿ ಸಕಲ ಸಿದ್ಧತೆಗಳನ್ನು ನಡೆಸಿಕೊಳ್ಳಲಾಗುತ್ತಿದೆ.

ಈ ಹಿಂದೆ ರಾಘವೇಶ್ವರ ಶ್ರೀಗಳು ಯಾವ ಪರೀಕ್ಷೆಗೊಳಪಡಲು ನಿರಾಕರಿಸಿದ್ದರೊ ಆ ಎಲ್ಲ ಪರೀಕ್ಷೆಗಳನ್ನು ನಾಳೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಟಿ.ದುರ್ಗಣ್ಣ ಅವರು, ಬುಧವಾರ ಬೆಳಗ್ಗೆ ಸರಿಯಾಗಿ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ಶ್ರೀಗಳ ದೈಹಿಕ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಮಾಡಲು ನಾಲ್ಕು ತಜ್ಞ ವೈದ್ಯರ ತಂಡವನ್ನು ರಚನೆ ಮಾಡಲಾಗಿದ್ದು, ನೆಫ್ರೋ ಯುರಾಲಜಿ ಸಂಸ್ಥೆಯ ಮುಖ್ಯಸ್ಥ ಡಾ.ಆರ್ ಕೇಶವಮೂರ್ತಿ ಮತ್ತು ವಿಕ್ಟೋರಿಯಾ ಆಸ್ಪತ್ರೆ ಮನೋರೋಗ ವಿಭಾಗದ ಮುಖ್ಯಸ್ಥರ ನೇತೃತ್ವದಲ್ಲಿ ಈ ದೈಹಿಕ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.

ಈ ವೇಳೆ ಶ್ರೀಗಳನ್ನು ವಿವಿಧ ರೀತಿಯ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಜೆನಿಟಲ್ ಎಕ್ಸಾಮಿನೇಷನ್ (ಜನನಾಂಗದ ಪರೀಕ್ಷೆ), ಸೆಮೆನ್ ಅನಾಲಿಸಿಸ್ (ವೀರ್ಯ ವಿಶ್ಲೇಷಣೆ), ವೀರ್ಯಾಣು ಪರೀಕ್ಷೆ, ಪುರುಷತ್ವ ಪರೀಕ್ಷೆ ಸೇರಿದಂತೆ ಸಂಪೂರ್ಣ ದೈಹಿಕ ಸಾಮರ್ಥ್ದ ಪರೀಕ್ಷೆ ನಡೆಸಲಾಗುತ್ತದೆ. ಇದಲ್ಲದೆ ಪ್ಯಾಪವೆರಿನ್ ಇಂಜೆಕ್ಷನ್ ಮೂಲಕ ಎರೆಕ್ಷನ್ ಪತ್ತೆ ಮಾಡಲಾಗುತ್ತದೆ. ಇದಲ್ಲದೆ ದೇಹದ ಮೇಲಿನ ಎಲ್ಲ ರೀತಿಯ ಮಾರ್ಕ್ (ಕಲೆಗಳು ಮತ್ತು ಮಚ್ಚೆಗಳು) ಗಳನ್ನು ಸಹ ಗುರುತಿಸುತ್ತೇವೆಬುಧವಾರ ಬೆಳಗ್ಗೆ 9 ಗಂಟೆಗೆ ಖಾಲಿ ಹೊಟ್ಟೆಯಲ್ಲಿ ಬರುವಂತೆ ರಾಘವೇಶ್ವರ ಶ್ರೀಗಳಿಗೆ ಸೂಚನೆ ನೀಡಲಾಗಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯ ತನಕ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದರು.

ಸಿಐಡಿ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೊರೆ
ಇದೇ ವೇಳೆ ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೀಡಿರುವ ನೋಟಿಸ್‌ ಅನ್ನು ಪ್ರಶ್ನಿಸಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ. ಸೆ.28ರಂದು ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣೆಯನ್ನು ಇಂದಿಗೆ ಮುಂದೂಡಿದೆ. ಒಂದು ವೇಳೆ ಇಂದು ಕರ್ನಾಟಕ ಹೈಕೋರ್ಟ್ ಸಿಐಡಿ ನೋಟಿಸ್‌ಗೆ ತಡೆಯಾಜ್ಞೆ ನೀಡಿದರೆ ಶ್ರೀಗಳು ವೈದ್ಯಕೀಯ ಪರೀಕ್ಷೆಗೆ ಹಾಜರಾಗಬೇಕಿಲ್ಲ. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರೀಗಳ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಹೈಕೋರ್ಟ್ ನೀಡುವ ತೀರ್ಪಿನ ಆಧಾರದ ಮೇಲೆ ಪರೀಕ್ಷೆ ನಡೆಯಲಿದೆಯೇ? ಇಲ್ಲವೇ? ಎಂಬುದು ನಿರ್ಧಾರವಾಗಲಿದೆ.

Write A Comment