ಕರ್ನಾಟಕ

ಪ್ರೇಮಲತಾ ಅತ್ಯಾಚಾರ ಪ್ರಕರಣ: ಇಂದು ರಾಘವೇಶ್ವರಶ್ರೀಗಳ ವೈದ್ಯಕೀಯ ಪರೀಕ್ಷೆ

Pinterest LinkedIn Tumblr

raghavaಬೆಂಗಳೂರು, ಸೆ.29: ಅತ್ಯಾಚಾರ ಆರೋಪ ವನ್ನು ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮಿಗಳ ವೈದ್ಯಕೀಯ ಪರೀಕ್ಷೆ ನಗರದ ವಿಕ್ಟೋರಿಯ ಆಸ್ಪತ್ರೆಯಲ್ಲಿ ಬುಧವಾರ (ಸೆ.30) ನಡೆಯಲಿದೆ.
ಸಿಐಡಿ ತನಿಖಾಧಿಕಾರಿಗಳು ಬುಧವಾರ ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ಶ್ರೀಗಳಿಗೆ ನೋಟಿಸ್ ನೀಡಿದ್ದು, ಶ್ರೀಗಳ ವೈದ್ಯಕೀಯ ಪರೀಕ್ಷೆಯನ್ನು ನಡೆಸಲು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರ ತಂಡ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ.
ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಕ್ಟೋರಿಯಾ ಆಸ್ಪತ್ರೆಯ ಅಧೀಕ್ಷಕ ಡಾ.ಟಿ.ದುರ್ಗಣ್ಣ, ಸಿಐಡಿ ತನಿಖಾಧಿಕಾರಿಗಳು ಶ್ರೀಗಳು ಹಿಂದೆ ಒಪ್ಪದಿದ್ದ ಪರೀಕ್ಷೆಗಳನ್ನು ನಡೆಸಲು ಸೂಚಿಸಿದ್ದು, ತಮ್ಮ ತಜ್ಞ ವೈದ್ಯರ ತಂಡ ಶ್ರೀಗಳ ಸಂಪೂರ್ಣ ದೈಹಿಕ ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ತಿಳಿಸಿದರು. ಬುಧವಾರ ಶ್ರೀಗಳ ಸಂಪೂರ್ಣ ದೈಹಿಕ ಪರೀಕ್ಷೆ ನಡೆಯಲಿದ್ದು, ಪ್ರಮುಖವಾಗಿ ದೈಹಿಕ, ವೀರ್ಯಾಣು ಹಾಗೂ ಪುರುಷತ್ವ ಪರೀಕ್ಷೆಗಳನ್ನು ಮಾಡಲಾಗುವುದು. ಜೆಟಲಿನ್ ಎಕ್ಸಾಮಿನೇಷನ್, ಸೆಮನ್ ಅನಲಿಸಿಸ್, ಪ್ಯಾಪವೆರಿನ್‌ಇಂಜೆಕ್ಷನ್ ಮೂಲಕ ಎರಕ್ಷನ್ ಪರೀಕ್ಷೆ ನಡೆಸಲಾಗುವುದು ಎಂದು ಅವರು ವಿವರಿಸಿದರು.
ಶ್ರೀಗಳಿಗೆ ಖಾಲಿ ಹೊಟ್ಟೆಯಲ್ಲಿ ಬೆಳಿಗ್ಗೆ 9 ಗಂಟೆಗೆ ಆಸ್ಪತ್ರೆಗೆ ಸಿಐಡಿ ಅಧಿಕಾರಿಗಳ ಮೂಲಕ ಬರಲು ತಿಳಿಸಲಾಗಿದೆ. ವೈದ್ಯಕೀಯ ಪರೀಕ್ಷೆ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದ್ದು, ದೇಹದ ಮೇಲಿನ ಮಚ್ಚೆಗಳನ್ನು ಕೂಡ ಗುರುತಿಸಲಾಗುವುದು ಎಂದು ಹೇಳಿದರು.
ಶ್ರೀಗಳು ಒಪ್ಪದಿದ್ದ ಪರೀಕ್ಷೆಗಳನ್ನು ನಡೆಸಲು ನಮ್ಮ ತಂಡದಲ್ಲಿ ಇನ್‌ಸ್ಟಿಟ್ಯೂಟ್ ಅಫ್ ನೆಫ್ರೋ ಯುರಾಲಜಿ ಸಂಸ್ಥೆಯ ಮುಖಸ್ಥ ಡಾ.ಕೇಶವಮೂರ್ತಿ, ಬೆಂಗಳೂರು ಮೆಡಿಕಲ್ ಕಾಲೇಜಿನ ಮೆಡಿಸಿನ್ಸ್ ವಿಭಾಗದ ಮುಖ್ಯಸ್ಥ ಡಾ.ವೀರಣ್ಣಗೌಡ, ವಿಕ್ಟೋರಿಯಾ ಆಸ್ಪತ್ರೆಯ ವಿಧಿವಿಜ್ಞಾನಗಳ ವಿಭಾಗದ ಮುಖ್ಯಸ್ಥ ಡಾ.ವೆಂಕಟರಾಘವನ್ ಹಾಗೂ ವಿಕ್ಟೋರಿಯಾ ಆಸ್ಪತ್ರೆಯ ಮನೋರೋಗ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಚಂದ್ರಶೇಖರ್ ಇರಲಿದ್ದಾರೆ ಎಂದು ಅವರು ವಿವರಿಸಿದರು.

Write A Comment