ಬೆಂಗಳೂರು, ಅ.1- ಹಿರಿಯ ನಾಗರಿಕರಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಮತ್ತೆ ಪುನರಾರಂಭ ಮಾಡಲಾಗುವುದು ಎಂದು ಮೇಯರ್ ಮಂಜುನಾಥರೆಡ್ಡಿ ಇಂದಿಲ್ಲಿ ಭರವಸೆ ನೀಡಿದರು.
ಅಖಿಲ ಕರ್ನಾಟಕ ವಯೋವೃದ್ಧರ ಒಕ್ಕೂಟದ ಸದಸ್ಯರೆಲ್ಲರೂ ಮೇಯರ್ ಮಂಜುನಾಥರೆಡ್ಡಿ ಅವರನ್ನು ಭೇಟಿ ಮಾಡಿ ಬಿಸಿಯೂಟ ಯೋಜನೆಯಿಂದ ಹಿರಿಯ ನಾಗರಿಕರಿಗೆ ಸಾಕಷ್ಟು ಸಹಾಯವಾಗಲಿದ್ದು, ಈ ಯೋಜನೆಯನ್ನು ಪುನಾರಾರಂಭಗೊಳಿಸಬೇಕೆಂದು ಮನವಿ ಮಾಡಿದರು.
ನಂತರ ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮೇಯರ್ ಅವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಶೀಘ್ರವಾಗಿ ಅನುಷ್ಟಾನಗೊಳಿಸುವುದಾಗಿ ಭರವಸೆ ನೀಡಿದರು.