ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ಯೋಗ್ಯತೆ ನಿಮಗಿಲ್ಲ. ಅವರ ಕೂದಲಿನ ಯೋಗ್ಯತೆಯೂ ನಿಮಗಿಲ್ಲ. ರಾಜ್ಯಕ್ಕೆ ನೀವು ಏನು ಕೊಡುಗೆ ಕೊಟ್ಟಿದ್ದೀರಿ? ಎಂದು ಸಂಸದೆ ಶೋಭ ಕರಂದ್ಲಾಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿದ್ದರಾಮಯ್ಯನವರು ಟೀಕಿಸಿದ್ದಕ್ಕೆ ಈ ರೀತಿ ತಿರುಗೇಟು ನೀಡಿದ್ದಾರೆ. ನರೇಂದ್ರ ಮೋದಿ ಅವರು ಒಂದು ವರ್ಷದಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ನೀವು ಮೈಸೂರಿಗೆ ಏನು ಕೊಡುಗೆ ನೀಡಿದ್ದೀರಿ, ರಾಜ್ಯಕ್ಕೆ ಏನು ಕೊಟ್ಟಿದ್ದೀರಿ? ಎಂದು ವಾಗ್ದಾಳಿ ನಡೆಸಿದರು.
ಇನ್ನು ಶೋಭಾ ಕರಂದ್ಲಾಜೆ ಹೇಳಿಕೆಗೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ವಿ.ಎಸ್ ಉಗ್ರಪ್ಪ ಬಿಜೆಪಿ ನಾಯಕರುಗಳ ಮಾತು ಅವರ ಸಂಸ್ಕೃ-ಸಂಪ್ರದಾಯ ತೋರಿಸುತ್ತದೆ ಎಂದು ಕಿಡಿ ಕಾರಿದ್ದಾರೆ.