ಕರ್ನಾಟಕ

ಇಂದು ರಾಜ್ಯಕ್ಕೆ ರಾಹುಲ್

Pinterest LinkedIn Tumblr

Rahul____________ಬೆಂಗಳೂರು, ಅ.8: ರಾಜ್ಯದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಕೆಪಿಸಿಸಿ ವತಿಯಿಂದ ಅವರ ಕಾರ್ಯಕ್ರಮಗಳಿಗೆ ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಶುಕ್ರವಾರ ಬೆಳಗ್ಗೆ 9:45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಹುಲ್‌ಗಾಂಧಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮಂಡ್ಯ ಜಿಲ್ಲೆಗೆ ತೆರಳಲಿದ್ದಾರೆ.

ಮೊದಲು ರೈತರ ಸಮಸ್ಯೆಗಳು ಹಾಗೂ ಪರಿಹಾರಗಳಿಗೆ ಸಂಬಂಧಿಸಿದಂತೆ ರಾಜ್ಯದ ಸಚಿವರೊಂದಿಗೆ ಸಮಾಲೋಚನೆ ನಡೆಸಲಿರುವ ಅವರು, ಆನಂತರ ಮಂಡ್ಯದಲ್ಲಿ ಆತ್ಮಹತ್ಯೆಗೆ ಶರಣಾದ ರೈತರ ಮನೆಗಳಿಗೆ ಭೇಟಿ ನೀಡಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿದ್ದಾರೆ.

Write A Comment