ಬೆಂಗಳೂರು: ‘ಮೈಸೂರಿನ ಹುಲಿ’ ಟಿಪ್ಪು ಸುಲ್ತಾನನ ಜಯಂತಿಯನ್ನು ಪ್ರತಿ ವರ್ಷ ನವೆಂಬರ್ 10ರಂದು ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಬಿದ್ದಿದೆ.
ಧೈರ್ಯ, ಸಾಹಸಗಳಿಗೆ ಹೆಸರಾಗಿದ್ದ ಟಿಪ್ಪು ಸುಲ್ತಾನ್ ಬ್ರಿಟಿಷ್’ರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ್ದರು. ಇವರ ಜನ್ಮ ದಿನವನ್ನು ಆಚರಿಸಲು ಸರ್ಕಾರ ಪ್ರತಿ ಜಿಲ್ಲೆಗೆ 50 ಸಾವಿರ ರೂಪಾಯಿ ಮತ್ತು ತಾಲೂಕು ಕೇಂದ್ರಕ್ಕೆ 25 ಸಾವಿರ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.
2014 ಡಿಸೆಂಬರ್‍ನಲ್ಲಿ ಇತಿಹಾಸ ತಜ್ಞ ಪ್ರೊ.ಬಿ. ಶೇಖ್ ಅಲಿ ಅವರು ಟಿಪ್ಪು ಸುಲ್ತಾನ್ ಬಗ್ಗೆ ಬರೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ವರ್ಷ ಸರ್ಕಾರದಿಂದಲೇ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲಾಗುವುದು ಎಂದು ತಿಳಿಸಿದ್ದರು.
