ಕರ್ನಾಟಕ

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪರಮೇಶ್ವರ, ವಿನಯ್, ಮಂಜು, ತಹಶೀಲ್ದಾರ್

Pinterest LinkedIn Tumblr

ministers

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಧಾರವಾಡ ಶಾಸಕ ವಿನಯ್ ಕುಲಕರ್ಣಿ, ಹಾವೇರಿ ಜೆಲ್ಲಿ ಹಾನಗಲ್ ಶಾಸಕ ಮನೋಹರ್ ತಹಶೀಲ್ದಾರ್ ಹಾಗೂ ಅರಕಲಗೂಡು ಶಾಸಕ ಎ. ಮಂಜು ಅವರು ನೂತನ ಸಚಿವರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಸಂಜೆ 4.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ನಾಲ್ವರು ಶಾಸಕರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಪರಮೇಶ್ವರ ಹಾಗೂ ಮನೋಹರ್ ತಹಶೀಲ್ದಾರ್ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ರಾಜ್ಯ ಖಾತೆಯ ಸ್ವತಂತ್ರ ಸಚಿವರಾಗಿ ವಿನಯ್ ಕುಲಕರ್ಣಿ ಹಾಗೂ ಎ.ಮಂಜು ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Write A Comment