ಕರ್ನಾಟಕ

ಮಂಡ್ಯ: ಪ್ರೀತಿಸಲು ನಿರಾಕರಿಸಿದ ಯುವತಿಯ ಕೈ ಕಡಿದ ಭಗ್ನಪ್ರೇಮಿ

Pinterest LinkedIn Tumblr

Loveಮಂಡ್ಯ: ತನ್ನ ಪ್ರೀತಿಸಲು ನಿರಾಕರಿಸಿದ್ದಕ್ಕೆ ಭಗ್ನ ಪ್ರೇಮಿಯೊಬ್ಬ ಯುವತಿಯ ಕೈಯನ್ನು ಮಚ್ಚಿನಿಂದ ಕಡಿದ ಘಟನೆ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಶನಿವಾರ ನಡೆದಿದೆ.

ಇಲ್ಲಿನ ನಾಗನದೊಡ್ಡಿಯ ಯುವತಿಯೊಬ್ಬಳು ಪ್ರೀತಿಸಲು ನಿರಾಕರಿಸಿದ್ದಕ್ಕೆ ತನ್ನಿಬ್ಬರು ಸ್ನೇಹಿತರ ಜತೆಗೂಡಿ ಬಂದು, ಯುವತಿ ಮೇಲೆ ಹಲ್ಲೆ ನಡೆಸಿದ್ದರು. ಮಚ್ಚಿನಿಂದ ಯುವತಿ ಮೇಲೆ ಹಲ್ಲೆ ನಡೆಸಿದ ನಿಲುವಾಗಿಲು ಗ್ರಾಮದ ನಿವಾಸಿ ರವಿ ಎಂಬಾತ ಪರಾರಿಯಾಗಲು ಯತ್ನಿಸಿದ್ದ. ಆದರೆ ಗ್ರಾಮಸ್ಥರು ಆತನನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ಗಾಯಗೊಂಡಿರುವ ಯುವತಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಬೆಸಗರಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-ಉದಯವಾಣಿ

Write A Comment