ಕರ್ನಾಟಕ

ಪತ್ನಿಯಿಂದ ಕಮೀಷನ್ ಪ್ರಕರಣ: ಸಚಿವ ಆಂಜನೇಯ ವಿರುದ್ಧ ಲೋಕಾಯುಕ್ತಕ್ಕೆ ದೂರು

Pinterest LinkedIn Tumblr

anjaneyaಬೆಂಗಳೂರು: ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರ ಪತ್ನಿ ಟೆಂಡರ್ ಗಾಗಿ ಕಮೀಷನ್ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಗಿರೀಶ್ ಗೌಡ ಅವರು ಶುಕ್ರವಾರ ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಸಚಿವರ ಅಧಿಕೃತ ನಿವಾಸದಲ್ಲೇ ಅವರ ಪತ್ನಿ ವಿಜಯ ಅವರು ಕಮೀಷನ್ ಪಡೆಯುತ್ತಿರುವ ದೃಶ್ಯ ಖಾಸಗಿ ಟೀವಿ ವಾಹಿನಿಯೊಂದು ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಬಯಲಾಗಿತ್ತು. ಈ ಸಂಬಂಧ ಇಂದು ಲೋಕಾಯುಕ್ತಕ್ಕೆ ದೂರು ನೀಡಿರುವ ಗಿರೀಶ್ ಗೌಡ ಅವರು, ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್

ಪತ್ನಿ ಕಮೀಷನ್ ಪ್ರಕರಣ ಮಾಧ್ಯಮಗಳಲ್ಲಿ ವರದಿಯಾಗುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿರುವ ಆಂಜನೇಯ ಅವರ ಪ್ರಕರಣದ ಬಗ್ಗೆ ಸಮಗ್ರ ವರದಿ ನೀಡುವಂತೆ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚಿಸಿದೆ.

Write A Comment