ಕರ್ನಾಟಕ

ಸಂಸದೀಯ ಕಾರ್ಯದರ್ಶಿಗಳ ಪ್ರಮಾಣ ವಚನ ಸ್ವೀಕಾರ

Pinterest LinkedIn Tumblr

karyadarsi-fiಬೆಂಗಳೂರು, ನ.7: ಪುತ್ತೂರು ಶಾಸಕಿ ಶಕುಂತಲಾ ಶೆಟ್ಟಿ ಸೇರಿದಂತೆ ವಿಧಾನಸಭೆಯ 9 ಹಾಗೂ ವಿಧಾನಪರಿಷತ್‌ನ ಓರ್ವ ಸದಸ್ಯ ಶನಿವಾರ ಸಂಸದೀಯ ಕಾರ್ಯದರ್ಶಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾ ಮಯ್ಯ ಕಿಕ್ಕಿರಿದು ತುಂಬಿದ್ದ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ನೂತನವಾಗಿ ನೇಮಕಗೊಂಡಿರುವ ಸಂಸದೀಯ ಕಾರ್ಯ ದರ್ಶಿಗಳಿಗೆ ಅಧಿಕಾರ ಹಾಗೂ ಗೌಪ್ಯತಾ ಪ್ರಮಾಣ ವಚನವನ್ನು ಬೋಧಿಸಿದರು. ವಿಧಾನಪರಿಷತ್ ಸದಸ್ಯ ಕೆ.ಗೋವಿಂದರಾಜು ಮುಖ್ಯಮಂತ್ರಿಯಸಂಸದೀಯ ಕಾರ್ಯದರ್ಶಿಯಾಗಿ, ಬಿಜಾಪುರ ನಗರ ಶಾಸಕ ಮಖ್ಬೂಲ್ ಎಸ್.ಭಗವಾನ್ ಬೆಂಗಳೂರು ನಗರಕ್ಕೆ ಸಂಬಂಧಪಟ್ಟ ವಿಷಯಗಳನ್ನು ಹೊರತುಪಡಿಸಿ ನಗರಾಭಿವೃದ್ಧಿ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ನಾಗಠಾಣಾ ಶಾಸಕ ರಾಜು ಅಲಗೂರು ವಸತಿ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ, ಚಿಂಚೋಳಿ ಶಾಸಕ ಡಾ. ಉಮೇಶ್ ಜಿ.ಜಾದವ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ, ಶಿರಹಟ್ಟಿ ಶಾಸಕ ದೊಡ್ಡಮನಿ ರಾಮಕೃಷ್ಣ ಸಿದ್ದಲಿಂಗಪ್ಪಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರ ಸಂಸದೀಯ ಕಾಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಕುಂದಗೋಳ ಶಾಸಕ ಸಿ.ಎಸ್.ಶಿವಳ್ಳಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಸಂಸದೀಯ ಕಾರ್ಯದರ್ಶಿ ಯಾಗಿ, ಪುತ್ತೂರು ಶಾಸಕಿ ಶಕುಂತಲಾ ಶೆಟ್ಟಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬ ಲೀಕರಣ, ಕನ್ನಡ ಮತ್ತು ಸಂಸ್ಕೃತಿ ರಾಜ್ಯ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಸಂಸದೀಯ ಕಾರ್ಯದರ್ಶಿ ಯಾಗಿ, ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಪ್ರವಾಸೋದ್ಯಮ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ಹಾಗೂ ಸಂಡೂರು ಶಾಸಕ ಈ.ತುಕಾರಾಮ್ ಲೋಕೋಪಯೋಗಿ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ಅಧಿಕಾರ ಮತ್ತು ಗೌಪ್ಯತಾ ಪ್ರಮಾಣ ವಚನವನ್ನು ಸ್ವೀಕರಿಸಿದರು. ಈ ಸಮಾರಂಭದಲ್ಲಿ ಸಚಿವರಾದ ಟಿ. ಬಿ. ಜಯಚಂದ್ರ, ಆರ್.ವಿ.ದೇಶಪಾಂಡೆ, ಎಚ್.ಕೆ.ಪಾಟೀಲ್, ಡಾ.ಖಮರುಲ್ ಇಸ್ಲಾಮ್, ಡಾ.ಜಿ.ಪರಮೇಶ್ವರ್, ಬಾಬುರಾವ್ ಚಿಂಚನಸೂರ್, ವಿಧಾನ ಪರಿ ಷತ್ತಿನ ಸರಕಾರಿ ಮುಖ್ಯ ಸಚೇತಕ ಆರ್.ವಿ.ವೆಂಕಟೇಶ್, ವಿಧಾನ ಸಭೆಯ ಸರಕಾರಿ ಮುಖ್ಯ ಸಚೇತಕ ಅಶೋಕ್‌ಪಟ್ಟಣ್, ಸರಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ, ಮುಖ್ಯ ಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಿ.ಎನ್.ನರಸಿಂಹರಾಜು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Write A Comment